ಪ್ರಮಾಣ ವಚನ ಸ್ವೀಕಾರದ ಬೆನ್ನಲ್ಲೇ ನಾನು ಇಂದಿನಿಂದಲೇ ಕೆಲಸಕ್ಕೆ ಇಳಿಯುತ್ತೇನೆ ಎಂದು ಘೋಷಿಸಿದ್ದ ಅವರು, ತಮ್ಮ ಮೊದಲ ಅಧಿಕೃತ ಸಭೆಯಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ಕಾರ್ಯಸೂಚಿಯನ್ನು ನೀಡಿದರು. ಬಿಹಾರವು ಇನ್ಮುಂದೆ ಮೋದಿ-ನಿತೀಶ್ ಮಾದರಿ ಆಡಳಿತವನ್ನು ಅನುಸರಿಸಲಿದೆ ಎಂದು ತಿಳಿಸಿದ ಚೌಧರಿ, ಜನಸಾಮಾನ್ಯರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಧಿಕಾರಿಗಳು ಈಗಿನ ವೇಗಕ್ಕಿಂತ ಎರಡು ಪಟ್ಟು ಹೆಚ್ಚು ವೇಗವಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದರು.