ನಿಮ್ಮಿಂದ ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನ ತಡೆಯಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ | Amit Shah

ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನಕ್ಕೆ ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಹುಲ್ ಗಾಂಧಿಯವರೇ ನಿಮ್ಮಿಂದ ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ನಿಮ್ಮಿಂದ ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನ ತಡೆಯಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ | Amit Shah
Published on: 

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನಕ್ಕೆ ಕಾಂಗ್ರೆಸ್ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಹುಲ್ ಗಾಂಧಿಯವರೇ ನಿಮ್ಮಿಂದ ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿಯಲ್ಲಿ ಗುರುವಾರ(ನ. 26) ನಡೆದ ಸಂವಿಧಾನ ಗೌರವ ದಿವಸ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಂವಿಧಾನದ ಬಗ್ಗೆ ಮಾತನಾಡುತ್ತಲೇ, ಮತ್ತೊಂದೆಡೆ ಸಾಂವಿಧಾನಿಕ ಸಂಸ್ಥೆಗಳನ್ನು ಅಪಹಾಸ್ಯ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಮಹಿಳೆಯರಿಗೆ ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಖಂಡಿತವಾಗಿಯೂ ಶೇಕಡಾ 33ರಷ್ಟು ಸ್ಥಾನಗಳ ಮೀಸಲಾತಿ ಸಿಗಲಿದೆ. ಹುಲ್ ಗಾಂಧಿ ಅವರಿಂದ ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನವೆಂಬರ್ 30 ರಿಂದ ಡಿಸೆಂಬರ್ 3 ರವರೆಗೆ ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನವನ್ನು ನಡೆಸುವ ಘೋಷಣೆ ನಡುವೆ ಶಾ ಅವರು ಈ ಹೇಳಿಕೆ ನೀಡಿದ್ದಾರೆ.

Also Read
ತಿರುಪರಂಕುಂದ್ರಂ ವಿವಾದ: ಇಂದು ತಮಿಳುನಾಡು ಸರ್ಕಾರ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್| Supreme Court
ನಿಮ್ಮಿಂದ ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನ ತಡೆಯಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ | Amit Shah

ದೇಶದ ಸಾಂವಿಧಾನಿಕ ಮತ್ತು ನ್ಯಾಯಾಂಗ ಸಂಸ್ಥೆಗಳನ್ನು ಪ್ರಶ್ನಿಸುತ್ತಿದ್ದಾರೆ ಎಂದು ರಾಹುಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ನ್ಯಾಯಾಲಯದ ತೀರ್ಪು ತಮಗೆ ಅನುಕೂಲಕರವಾಗಿಲ್ಲದಿದ್ದಾಗಲೆಲ್ಲಾ ಅವರು ನ್ಯಾಯಾಂಗವನ್ನೇ ಪ್ರಶ್ನಿಸುತ್ತಾರೆ. ಸಂಸತ್ತಿನಲ್ಲಿ ಚರ್ಚೆ ನಡೆಸುವ ಬದಲು, ಬೀದಿಗಳಲ್ಲಿ ಚರ್ಚೆ ನಡೆಸುವ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಚುನಾವಣಾ ಆಯೋಗ ಮತ್ತು ಮತದಾರರ ಪಟ್ಟಿಯ ಪರಿಷ್ಕರಣಾ ಪ್ರಕ್ರಿಯೆಯನ್ನು (SIR) ದೂಷಿಸುತ್ತಾರೆ, ಅಲ್ಲದೆ ಭಾರತದ ವರ್ಚಸ್ಸನ್ನು ಹಾಳುಮಾಡಲು ವಿದೇಶಗಳಿಗೆ ಹೋಗುತ್ತಾರೆ. ರಾಹುಲ್ ಗಾಂಧಿಯವರ ಈ ರಾಜಕೀಯ ಧೋರಣೆ ಕುಣಿಯಲಾರದವನು ನೆಲ ಡೊಂಕು ಎನ್ನುವಂತಿದೆ ಎಂದು ವ್ಯಂಗ್ಯವಾಡಿದ್ದಾರೆ.

Also Read
ನ. 30ರಿಂದ ವಿಶೇಷ ಸಂಸತ್ ಅಧಿವೇಶ: ಮತ್ತೆ ಡಿಲಿಮಿಟೇಷನ್, ಮಹಿಳಾ ಮೀಸಲಾತಿ ಮಸೂದೆ ಮಂಡನೆ ಸಾಧ್ಯತೆ | Special Parliament session
ನಿಮ್ಮಿಂದ ಮಹಿಳಾ ಮೀಸಲಾತಿ ಮಸೂದೆಯ ಅನುಷ್ಠಾನ ತಡೆಯಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ | Amit Shah

ರಾಜಕೀಯ ನಾಯಕರು ಜನರ ಬಳಿಗೆ ಹೋಗಬೇಕು, ಅವರ ವಿಶ್ವಾಸವನ್ನು ಗಳಿಸಬೇಕು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ಶ್ರಮಿಸಬೇಕು. ದೇಶದಲ್ಲಿ ಪ್ರವಾಹ ಮತ್ತು ಬರಗಾಲದಂತಹ ಸಮಸ್ಯೆಗಳನ್ನು ನಿರ್ಲಕ್ಷಿಸಿ, ಪ್ರತಿ ಮೂರು ತಿಂಗಳಿಗೊಮ್ಮೆ ವಿದೇಶದಲ್ಲಿ ರಜೆ ಕಳೆಯುವುದರಿಂದ ಜನರ ವಿಶ್ವಾಸವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಟೀಕಿಸಿದ್ದಾರೆ.

ಏಕರೂಪ ನಾಗರಿಕ ಸಂಹಿತೆ (UCC) ಕುರಿತು ಮಾತನಾಡಿದ ಶಾ, ಧರ್ಮದ ಭೇದವಿಲ್ಲದೆ ಎಲ್ಲಾ ನಾಗರಿಕರಿಗೂ ಒಂದೇ ರೀತಿಯ ಕಾನೂನುಗಳನ್ನು ಖಚಿತಪಡಿಸಿಕೊಳ್ಳಲು, ಸಂವಿಧಾನ ರಚನೆಕಾರರು ಇದನ್ನು ರಾಜ್ಯ ನೀತಿಯ ನಿರ್ದೇಶಕ ತತ್ವಗಳಲ್ಲಿ ಸೇರಿಸಿದ್ದರು. ರಾಹುಲ್ ಗಾಂಧಿ ಅವರ ಪಕ್ಷವು ಇದನ್ನು ವಿರೋಧಿಸುತ್ತದೆ, ಆದರೆ ಮುಂಬರುವ ದಿನಗಳಲ್ಲಿ ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳಲ್ಲಿ ನಾವು ಈ ಸಂಹಿತೆಯನ್ನು ಜಾರಿಗೆ ತರಲಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ (ಏಜೆನ್ಸೀಸ್).