ಅಣ್ಣನಿಗೆ ರಾಜಕೀಯದ ಗಂಧ-ಗಾಳಿಯೂ ಗೊತ್ತಿಲ್ಲ, ತಂಗಿ ಗೆದ್ದಿದ್ದು ಮುಸ್ಲಿಂ ಲೀಗ್​​ನಿಂದ...ಮಾಧ್ಯಮ ವರದಿ ಬಗ್ಗೆ ಮಹತ್ವದ ಪ್ರಶ್ನೆ ಎತ್ತಿದ ಕಮಲ ನಾಯಕ! | Sudhanshu Trivedi

ನವದೆಹಲಿ: ಮತದಾರರ ಪಟ್ಟಿಯ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯನ್ನು ಆಧಾರಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ನಡೆಸಿದ ಪತ್ರಿಕಾಗೋಷ್ಠಿಯ ವಿರುದ್ಧ ಬಿಜೆಪಿ ತಿರುಗೇಟು ನೀಡಿದ್ದು, ರಾಹುಲ್​ಗೆ ಎಳ್ಳಷ್ಟು ರಾಜಕೀಯ ಜ್ಞಾನವಿಲ್ಲ ಎಂದು ಬಿಜೆಪಿ ಟೀಕಿಸಿದೆ.
ಅಣ್ಣನಿಗೆ ರಾಜಕೀಯದ ಗಂಧ-ಗಾಳಿಯೂ ಗೊತ್ತಿಲ್ಲ, ತಂಗಿ ಗೆದ್ದಿದ್ದು ಮುಸ್ಲಿಂ ಲೀಗ್​​ನಿಂದ: ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ
ಅಣ್ಣನಿಗೆ ರಾಜಕೀಯದ ಗಂಧ-ಗಾಳಿಯೂ ಗೊತ್ತಿಲ್ಲ, ತಂಗಿ ಗೆದ್ದಿದ್ದು ಮುಸ್ಲಿಂ ಲೀಗ್​​ನಿಂದ: ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ
Published on: 

ನವದೆಹಲಿ: ಮತದಾರರ ಪಟ್ಟಿಯ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯನ್ನು ಆಧಾರಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ನಡೆಸಿದ ಪತ್ರಿಕಾಗೋಷ್ಠಿಯ ವಿರುದ್ಧ ಬಿಜೆಪಿ ತಿರುಗೇಟು ನೀಡಿದ್ದು, ರಾಹುಲ್​ಗೆ ಎಳ್ಳಷ್ಟು ರಾಜಕೀಯ ಜ್ಞಾನವಿಲ್ಲ ಎಂದು ಬಿಜೆಪಿ ಟೀಕಿಸಿದೆ.

ರಾಹುಲ್ ಗಾಂಧಿ ಅವರ ಪತ್ರಿಕಾಗೋಷ್ಠಿ ಕುರಿತಾಗಿ ಪ್ರತಿಕ್ರಿಯೆ ನೀಡಿದ ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ, ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ ಒಂದೇ ಒಂದು ಚುನಾವಣೆಯನ್ನೂ ಗೆಲ್ಲಲು ಸಾಧ್ಯವಾಗಿಲ್ಲ. ಪ್ರಿಯಾಂಕಾ ಗಾಂಧಿ ಅವರು ಮುಸ್ಲಿಂ ಲೀಗ್ ಬೆಂಬಲದೊಂದಿಗೆ ವಯನಾಡ್ ಕ್ಷೇತ್ರವನ್ನು ಗೆದ್ದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಮುಂದುವರೆದು ಮಾತನಾಡಿದ ಅವರು, ಬಂಗಾಳದಲ್ಲಿ 1977 ರಿಂದ, ಬಿಹಾರದಲ್ಲಿ 1990 ರಿಂದ, ಉತ್ತರ ಪ್ರದೇಶದಲ್ಲಿ 1989 ರಿಂದ, ಒಡಿಶಾದಲ್ಲಿ 1999 ರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ ಎಂದು ತ್ರಿವೇದಿ ಅಂಕಿ-ಅಂಶಗಳ ಸಮೇತ ಕೈ ನಾಯಕರಿಗೆ ಕುಟುಕಿದರು.

ಚುನಾವಣಾ ಆಯೋಗದ ಪ್ರಕ್ರಿಯೆ ಮತ್ತು ಎಸ್‌ಐಆರ್ ಕುರಿತ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯನ್ನು ಪ್ರಶ್ನಿಸಿದ ಸುಧಾಂಶು ತ್ರಿವೇದಿ, ವರದಿಯಲ್ಲಿ ಚುನಾವಣಾ ಆಯುಕ್ತರ ಹೇಳಿಕೆಗಳನ್ನು ಏಕೆ ಬಳಸಲಾಗಿಲ್ಲ, ಆರೋಪ ಹೊತ್ತಿರುವವರ ಹೇಳಿಕೆಗಳೇ ಇಲ್ಲದೆ, ಅವರ ವಿರುದ್ಧವಾಗಿ ಒಂದು ಪರಿಪೂರ್ಣ ಮತ್ತು ನೈಜ ವರದಿ ಸಿದ್ಧಪಡಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಎಸ್​​ಐಆರ್​ ರಾದ್ಧಾಂತ!...ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಇಂಡಿಯಾ ಕೂಟ ಹೊಸ ತಂತ್ರ | Gyanesh Kumar

ಜ್ಞಾನೇಶ್ ಕುಮಾರ್ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ!

ಇದಕ್ಕೂ ಮುನ್ನ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ದೇಶದ ಚುನಾವಣಾ ವ್ಯವಸ್ಥೆಯ ಮೇಲೆಯೇ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿ, ತಕ್ಷಣವೇ ತಮ್ಮ ಹುದ್ದೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದರು.

ಎಸ್‌ಐಆರ್ ಪ್ರಕ್ರಿಯೆಯ ಕುರಿತು ಇಬ್ಬರು ಚುನಾವಣಾ ಆಯುಕ್ತರು ಎತ್ತಿದ್ದಾರೆ ಎನ್ನಲಾದ ಆಕ್ಷೇಪಣೆಗಳ ಬಗ್ಗೆ ಬೆಳಕು ಚೆಲ್ಲಿದ ಕಾಂಗ್ರೆಸ್​ ನಾಯಕ, ಆ ಇಬ್ಬರು ಚುನಾವಣಾ ಆಯುಕ್ತರು ವಿವೇಕಯುತ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಪ್ರಜಾಪ್ರಭುತ್ವವನ್ನು ರಕ್ಷಿಸುವ ಅಗತ್ಯದ ಬಗ್ಗೆ ಮಾತನಾಡಿದ ಅವರು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಅಪ್ರೂವರ್ ಆಗಬೇಕು ಎಂದು ಆಗ್ರಹಿಸುತ್ತಾ, ಈ ಘಟನೆಗೆ ಸಂಬಂಧಿಸಿದಂತೆ ತಕ್ಕ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ, ಪ್ರಜಾಪ್ರಭುತ್ವವನ್ನು ನಾಶಮಾಡುವುದಕ್ಕೆ ಕಾಂಗ್ರೆಸ್​ ಪಕ್ಷ ಅವಕಾಶ ನೀಡುವುದಿಲ್ಲ, ಈ ಬೆಳವಣಿಗೆಗೆ ಕಾರಣರಾದವರಿಗೆ ಶಿಕ್ಷೆಯಾಗಲಿದೆ ಎಂದು ರಾಹುಲ್​ ಎಚ್ಚರಿಕೆ ನೀಡಿದರು.

ಸಿಇಸಿ ವಿರುದ್ಧ ಕಾಂಗ್ರೆಸ್​ ಆಕ್ರೋಶ!...

ಈ ವಿಷಯವಾಗಿ ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಮುಗಿಬಿದ್ದಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, ಅನ್ಯಾಯದ ಚುನಾವಣಾ ಪದ್ಧತಿಗಳನ್ನು ಅನುಸರಿಸಿದ್ದಕ್ಕಾಗಿ ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಮತದಾರರ ಪಟ್ಟಿಯಿಂದ ಸುಮಾರು 13 ಕೋಟಿ ಹೆಸರುಗಳನ್ನು ಜ್ಞಾನೇಶ್ ಕುಮಾರ್ ಅವರು ಉದ್ದೇಶಪೂರ್ವಕವಾಗಿ ಡಿಲೀಟ್ ಮಾಡಲು ಅವಕಾಶ ನೀಡಿದ್ದಾರೆ ಎಂದು ಆರೋಪಿಸಿರುವ ಪ್ರಿಯಾಂಕಾ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಒತ್ತಾಯಿಸಿದ್ದಾರೆ.

ವಯನಾಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ ವಾದ್ರಾ, ಮತದಾರರನ್ನು ಪಟ್ಟಿಯಿಂದ ತೆಗೆದುಹಾಕುವುದು ಪ್ರಜಾಪ್ರಭುತ್ವ, ಸಂವಿಧಾನ ಮತ್ತು ದೇಶದ ವಿರುದ್ಧ ಎಸಗಿದ ಕ್ರಿಮಿನಲ್ ಕೃತ್ಯವಾಗಿದೆ ಎಂದಿದ್ದಾರೆ. ಪ್ರಜಾಸತ್ತಾತ್ಮಕ ಚುನಾವಣಾ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶಿಸುವ ಯಾರೇ ಆದರೂ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕು. ನಮ್ಮ ಚುನಾವಣೆಗಳ ಪ್ರಜಾಸತ್ತಾತ್ಮಕ ಪ್ರಕ್ರಿಯೆಯೊಂದಿಗೆ ಚೆಲ್ಲಾಟವಾಡುವ ಯಾವುದೇ ವ್ಯಕ್ತಿಯು ಈ ದೇಶದ ವಿರುದ್ಧ ದೇಶದ್ರೋಹದ ಎಸಗುತ್ತಿದ್ದಾನೆ ಎಂದು ಹೇಳಿರುವ ಅವರು, ಇದು ಕಾಂಗ್ರೆಸ್ ಪಕ್ಷದ ಅತ್ಯಂತ ಸ್ಪಷ್ಟ ನಿಲುವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Also Read
ಗೋವಾ ಮತದಾರರ ಪಟ್ಟಿ ವಿವಾದ: 97 ಅರ್ಹ ಮತದಾರರ ಹೆಸರೇ ಮಾಯ!...ಆಕ್ರೋಶದ ಬೆನ್ನಲ್ಲೇ ಚುನಾವಣಾಧಿಕಾರಿ ಸ್ಪಷ್ಟನೆ ಹೀಗಿದೆ | Voter List Controversy
ಅಣ್ಣನಿಗೆ ರಾಜಕೀಯದ ಗಂಧ-ಗಾಳಿಯೂ ಗೊತ್ತಿಲ್ಲ, ತಂಗಿ ಗೆದ್ದಿದ್ದು ಮುಸ್ಲಿಂ ಲೀಗ್​​ನಿಂದ: ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ

ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿಯಲ್ಲೇನಿದೆ...?

ಮೂವರು ಸದಸ್ಯರ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಮತ್ತು ಎಸ್‌ಐಆರ್ ಪ್ರಕ್ರಿಯೆಯ ಜಾರಿಯ ಕುರಿತಾಗಿ ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿ ಉಳಿದಿಬ್ಬರು ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳಲ್ಲಿ ಕನಿಷ್ಠ 14 ಬಾರಿ ಆಕ್ಷೇಪಣೆ ಎತ್ತಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಟಿಸಿದ ಮರುದಿನ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯ ಮೂಲಕ ಈ ಹೇಳಿಕೆಗಳನ್ನು ನೀಡಿದ್ದರು.

ದೇಶದ ಅನೇಕ ರಾಜ್ಯಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಮೂವರೂ ಆಯುಕ್ತರ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆಯಾದರೂ, ತಮ್ಮ ಗಮನಕ್ಕೆ ತರದೆ ತೆಗೆದುಕೊಂಡ ನಿರ್ಧಾರಗಳು ಮತ್ತು ಆದೇಶಗಳ ವಿರುದ್ಧ ಸಂಧು ಮತ್ತು ಜೋಶಿ ಅವರು ಕನಿಷ್ಠ 14 ಬಾರಿ ಅಧಿಕೃತವಾಗಿ ಆಕ್ಷೇಪಣೆ ದಾಖಲಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಎಸ್‌ಐಆರ್ ಪ್ರಕ್ರಿಯೆಯು ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಗೆ ಬೆಂಬಲ ನೀಡದ ಮತದಾರರ ಮೇಲೆ ಪೂರ್ವಾಗ್ರಹ ಪೀಡಿತವಾಗಿ ಪರಿಣಾಮ ಬೀರುತ್ತಿದೆ ಎಂದು ವಿರೋಧ ಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ಹರಿಹಾಯ್ದಿವೆ(ಏಜೆನ್ಸೀಸ್​).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net