ಈ ಕುರಿತು ಎಕ್ಸ್ನಲ್ಲಿ ಮಾಹಿತಿ ನೀಡಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಪ್ರೀತಿಯ ಜುಬೀನ್ ಗರ್ಗ್ ಕೊಲೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ನಮ್ಮ ಸಾಮೂಹಿಕ ಹೋರಾಟಕ್ಕೆ ಇಂದು ಮಹತ್ವದ ಮೈಲಿಗಲ್ಲು ಸಿಕ್ಕಿದೆ. ಈ ಪ್ರಕರಣವನ್ನು ತ್ವರಿತಗತಿಯಲ್ಲಿ ದೈನಂದಿನ ವಿಚಾರಣೆ ನಡೆಸಲು ಗುವಾಹಟಿ ಹೈಕೋರ್ಟ್‌ನ ಗೌರವಾನ್ವಿತ ಮುಖ್ಯ ನ್ಯಾಯಾಧೀಶರು, ಬಕ್ಸಾ ಜಿಲ್ಲಾ ನ್ಯಾಯಾಧೀಶರಾದ ಶ್ರೀಮತಿ ಶರ್ಮಿಳಾ ಭುಯಾನ್ ಅವರ ನೇತೃತ್ವದಲ್ಲಿ ವಿಶೇಷ ಫಾಸ್ಟ್-ಟ್ರ್ಯಾಕ್ ಕೋರ್ಟ್ ರಚಿಸಿದ್ದಾರೆ.