ಡಿ.ಜೆ.ಹಳ್ಳಿ ಗಲಭೆ: ಆರೋಪಿ ನವೀನ್​​ ಜಾಮೀನು ಅರ್ಜಿ ವಜಾ

Naveen Kumar
Published on

ಬೆಂಗಳೂರು: ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿ ನವೀನ್​ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 1ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದೆ.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಳಿಯ ನವೀನ್​ ಹಾಕಿದ್ದ ಫೇಸ್​ಬುಕ್​ ಪೋಸ್ಟ್​ಗಳೇ ಗಲಭೆಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ನವೀನ್​ ವಿರುದ್ಧ ಡಿಜೆ ಹಳ್ಳಿ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು.

ಸರ್ಕಾರದ ವಿಶೇಷ ಅಭಿಯೋಜಕ ಪ್ರಸನ್​ಕುಮಾರ್​ ಅವರು ವಾದಮಂಡನೆ ಮಾಡಿದ್ದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net