ಗಣಪತಿ ಆರಾಧನೆಯಿಂದ ಇಷ್ಟಾರ್ಥ ಸಿದ್ಧಿ

navunda
ನಾವುಂದದ ಹಿಂದು ಅಭ್ಯುದಯ ಸಂಘದ ವತಿಯಿಂದ ನಡೆದ 44ನೇ ವರ್ಷದ ಗಣೇಶೋತ್ಸವ ಸಮಾರಂಭದಲ್ಲಿ ಭಾರತೀಯ ಸೇನೆಗೆ ನೇಮಕಾತಿಯಾದ ಭರತ್ ಬಾಬು ದೇವಾಡಿಗ ಅವರನ್ನು ಸನ್ಮಾನಿಸಲಾಯಿತು. ಎಂ. ಕೃಷ್ಣ ಭಟ್, ಶಶಿಧರ ಎಂ. ಶೆಟ್ಟಿ, ಅರುಣ್ ಕುಮಾರ್ ಎನ್ ಮೊದಲಾದವರಿದ್ದರು
Published on

ವಿಜಯವಾಣಿ ಸುದ್ದಿಜಾಲ ಬೈಂದೂರು

ನಮ್ಮ ಹಿಂದು ಸಂಸ್ಕೃತಿಯಲ್ಲಿ ಪ್ರತಿಯೊಂದು ಆಚರಣೆಗಳಿಗೂ ಮಹತ್ವವಿದೆ. ವಿಘ್ನವಿನಾಶಕ ಗಣಪತಿಯ ಆರಾಧನೆಯಿಂದ ಸಕಲ ಇಷ್ಟಾರ್ಥ ನೆರವೇರುತ್ತವೆ. ನಮ್ಮ ಧಾರ್ಮಿಕ ಆಚರಣೆ ಜತೆಗೆ ನಮ್ಮ ಸಂಸ್ಕೃತಿಯನ್ನೂ ಬೆಳೆಸೋಣ ಎಂದು ಯರುಕೋಣೆ ಮಠ ಶ್ರೀ ವೆಂಕಟರಮಣ ದೇವಸ್ಥಾನದ ಪ್ರಧಾನ ಅರ್ಚಕ ಎಂ.ಕೃಷ್ಣ ಭಟ್ ಹೇಳಿದರು.

ನಾವುಂದ ಹಿಂದು ಅಭ್ಯುದಯ ಸಂಘದ ವತಿಯಿಂದ ನಡೆದ 44ನೇ ವರ್ಷದ ಗಣೇಶೋತ್ಸವದಲ್ಲಿ ಅವರು ಮಾತನಾಡಿದರು.
ಹಿಂದು ಅಭ್ಯುದಯ ಸಂಘದ ಅಧ್ಯಕ್ಷ ಶಶಿಧರ ಎಂ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಸೇನೆಯ ಕುಂದಾಪುರದ ವಾಣಿಜ್ಯ ತೆರಿಗೆಗಳ ಸಹಾಯಕ ಆಯುಕ್ತ ಅರುಣ್ ಕುಮಾರ್ ಎನ್, ಮಸ್ಕಿಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಕಾರಂತ, ನಾವುಂದ ಶ್ರೀ ಮಹಾಗಣಪತಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷ ಅಭಿಷೇಕ್, ಹಿಂದು ಅಭ್ಯದಯ ಸಂಘದ ಉಪಾಧ್ಯಕ್ಷ ಪ್ರವೀಣ್ ಪೂಜಾರಿ ಉಪಸ್ಥಿತರಿದ್ದರು.
ಸಂಘದ ಕೋಶಾಧಿಕಾರಿ ರತ್ನಾಕರ ಕೆ. ಸ್ವಾಗತಿಸಿದರು. ಜತೆ ಕಾರ್ಯದರ್ಶಿ ವಿಘ್ನೇಶ್ವರ ಕೆ. ವಂದಿಸಿದರು. ಕಾರ್ಯದರ್ಶಿ ಎ. ಶಿವರಾಮ ಮಧ್ಯಸ್ಥ ಕಾರ್ಯಕ್ರಮ ನಿರೂಪಿಸಿದರು.

ಸಂಘದಿಂದ ಸಹಾಯಧನ

ಲೆಫ್ಟಿನೆಂಟ್ ಹುದ್ದೆಗೆ ನೇರ ನೇಮಕಾತಿಗೊಂಡ ನಾವುಂದದ ಭರತ್ ಬಾಬು ದೇವಾಡಿಗ ಅವರನ್ನು ಸನ್ಮಾನಿಸಲಾಯಿತು. ಕಾಯಿಲೆಗಳಿಂದ ಬಳಲುತ್ತಿರುವ ಮೂರು ಮಂದಿಗೆ ಸಂಘದ ವತಿಯಿಂದ 14,000 ರೂ. ವೈದ್ಯಕೀಯ ಸಹಾಯಧನ ನೀಡಲಾಯಿತು. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಗಳಲ್ಲಿ ಗರಿಷ್ಠ ಅಂಕ ಪಡೆದ 10 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಗಣೇಶೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ನಡೆಸಿದ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net