

ಪಾಟ್ನಾ: ಬಿಹಾರದ ವಿಧಾನಸಭಾ ಚುನಾವಣೆ (Bihar Election )ಮುಕ್ತ ಮತ್ತು ನ್ಯಾಯಯುತವಾಗಿ ನಡೆದಿದ್ದೇ ಆದರೆ, ಇಲ್ಲಿನ ಜನರು ಎನ್ಡಿಎ ಸರ್ಕಾರವನ್ನು ಬೇರು ಸಮೇತ ಕಿತ್ತುಹಾಕಿ, ಬಡವರು, ಮಹಿಳೆಯರು ಮತ್ತು ಯುವಕರಿಗೆ ಕೆಲಸ ಮಾಡುವ ಸರ್ಕಾರವನ್ನು ಸ್ಥಾಪಿಸಲಿದ್ದಾರೆ ಎಂದು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.
ಬಿಹಾರದ ಮೋತಿಹರಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕಾ, ಬಿಜೆಪಿ ನಾಯಕರು ಅಭಿವೃದ್ಧಿಗಾಗಿ ಅಲ್ಲ, ಧರ್ಮದ ಹೆಸರಿನಲ್ಲಿ ಎನ್ಡಿಎ ಮತಯಾಚನೆ ನಡೆಸುತ್ತಿದೆ. ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 27 ಸೇತುವೆಗಳು ಕುಸಿದಿವೆ ಎಂದು ಆರೋಪಿಸಿದರು.
ರಾಷ್ಟ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಬಿಹಾರದ ಜನರ ಬಗ್ಗೆ ಎನ್ಡಿಎ ಸರ್ಕಾರಕ್ಕೆ ಗೌರವವಿಲ್ಲ, ಮತಕಳ್ಳತನ ಮೂಲಕ ಬಿಹಾರದಲ್ಲಿ ಅಧಿಕಾರ ಹಿಡಿಯಲು ಬಯಸುತ್ತಿದೆ, ಮತದಾರರ ಪಟ್ಟಿ ಪರಿಷ್ಕರಣೆಯ ಮೂಲಕ ಮಹಿಳೆಯರು ಸೇರಿದಂತೆ 65 ಲಕ್ಷ ಜನರ ಹೆಸರುಗಳನ್ನು ಅಳಿಸಲಾಗಿದೆ ಎಂದು ಟೀಕಿಸಿದರು.
ನನ್ನ ಸಹೋದರ ರಾಹುಲ್ ಗಾಂಧಿ ಹರಿಯಾಣದಲ್ಲಿ ಮತ ಕಳ್ಳತನದ ಬಗ್ಗೆ ಮಾತನಾಡಿದ್ದಾರೆ, ಅಲ್ಲಿ 2024ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕವಾಗಿ ಮತದಾರರ ವಂಚನೆ ನಡೆದಿದೆ, ಭವಿಷ್ಯದಲ್ಲಿ ದೇಶದಲ್ಲಿ ಚುನಾವಣೆ ನಡೆಯುತ್ತವಯೋ, ಇಲ್ಲವೋ ಎನ್ನುವುದರ ಬಗ್ಗೆ ಅನುಮಾನವಿದೆ, ಎನ್ಡಿಎ ಎಲ್ಲವನ್ನೂ ನಾಶಪಡಿಸುತ್ತದೆ, ಭವಿಷ್ಯದಲ್ಲಿ ಚುನಾವಣೆಗಳು ನೀವು ಯಾಕೆ ಮೌನವಾಗಿದ್ದೀರಿ? ಅವರನ್ನು ಅಧಿಕಾರದಿಂದ ಓಡಿಸಿ ಎಂದು ಹೇಳಿದರು.
2 ಕೋಟಿ ಮತದಾರರಿರುವ ಹರಿಯಾಣದಲ್ಲಿ 25 ಲಕ್ಷ ಮತಗಳನ್ನು ಕಳವು ಮಾಡಲಾಗಿದೆ, ಇದರಲ್ಲಿ 5.21 ಲಕ್ಷ ನಕಲಿ ಮತದಾರರು, 93,174 ಅನರ್ಹ ಮತದಾರರು ಮತ್ತು 19.26 ಲಕ್ಷ ಬೃಹತ್ ಮತದಾರರು ಸೇರಿದ್ದಾರೆ ಇದರ ಅರ್ಥ ಪ್ರತಿ ಎಂಟು ಮತದಾರರಲ್ಲಿ ಒಬ್ಬರು ನಕಲಿ, ಅಂದರೆ ಶೇಕಡಾ 12.5 ರಷ್ಟು, ಇದರ ಉದ್ದೇಶವೇ ಮೊಸದ ಮೂಲಕ ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದಾಗಿತ್ತು ಎಂದರು. ಹರಿಯಾಣ ಚುನಾವಣೆಯ ದಿನ ಎಲ್ಲಾ ಎಕ್ಸಿಟ್ ಪೋಲ್ ಸಮೀಕ್ಷೆಗಳು ಕಾಂಗ್ರೆಸ್ ಪಕ್ಷದ ಗೆಲುವಿನ ಭವಿಷ್ಯ ನುಡಿದಿದ್ದವು, ಆದರೆ ಫಲಿತಾಂಶ ಬದಲಾಗಿ ಬಿಜೆಪಿ ಗೆಲುವು ಸಾಧಿಸಿವೆ ಎಂದರು. ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಫಲಿತಾಂಶ ಪ್ರಕಟವಾಗುವ ಮುನ್ನವೇ ಮಾಧ್ಯಮಗಳ ಮುಂದೆ ಬಿಜೆಪಿ ಈ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿರುವ ವೀಡಿಯೊವನ್ನು ಸಹ ಪ್ರದರ್ಶಿಸಿದರು.
ಚುನಾವಣಾ ಆಯೋಗವು ಮನಸ್ಸು ಮಾಡಿದರೆ ಒಂದು ಸೆಕೆಂಡಿನಲ್ಲಿ ನಕಲಿ ಮತದಾರರನ್ನು ತೆಗೆದುಹಾಕಬಹುದು. ಆದರೆ ಅವರು ಏಕೆ ಅದನ್ನು ಮಾಡುತ್ತಿಲ್ಲ? ಕಾರಣ ಸ್ಪಷ್ಟ, ಅವರು ಬಿಜೆಪಿಗೆ ಸಹಾಯ ಮಾಡುತಿದ್ದಾರೆ ಎಂದು ಹೇಳಿದರು. ಇದೇ ವೇಳೆ ರಾಜ್ಯದ ಮತದಾರರ ಪಟ್ಟಿಯಲ್ಲಿ ಒಂದೇ ರೀತಿಯ ಚಿತ್ರಗಳಿಗೆ ವಿಭಿನ್ನ ಹೆಸರುಗಳನ್ನು ಹೊಂದಿರುವ ಮತದಾರರ ಗುರುತಿನ ಚೀಟಿಗಳ ನಿದರ್ಶನಗಳನ್ನು ತೋರಿಸಿದರು.(ಏಜೆನ್ಸಿಸ್)