ಬಾಗಲಕೋಟೆ ಬಿವಿವಿ ಸಂಘದ ಮೆಡಿಕಲ್ ಕಾಲೇಜ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕೇರಳದ ಓಣಂ ಹಬ್ಬಕ್ಕೆ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಚಾಲನೆ ನೀಡಿದರು. ಮಹೇಶ ಅಥಣಿ, ಅಶೋಕ ಸಜ್ಜನ, ಪ್ರಾಚಾರ್ಯ ದಿಲೀಪ್ ನಾಟೆಕರ್ ಇತರರು ಇದ್ದರು.
ಭಾರತವು ವಿವಿಧ ಧರ್ಮ, ಸಮುದಾಯ, ಭಾಷೆ ಹಾಗೂ ಸಂಪ್ರದಾಯಗಳನ್ನು ಒಳಗೊಂಡ ಸಾಂಸ್ಕೃತಿಕ ವೈವಿಧ್ಯತೆಯ ರಾಷ್ಟçವಾಗಿದೆ. ವಿಭಿನ್ನತೆಯಲ್ಲಿ ಏಕತೆ ಎಂಬುದೇ ಭಾರತದ ಸಂಸ್ಕೃತಿಯ ವಿಶೇಷತೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಹೇಳಿದರು.
ನಗರದ ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಶಿವಾಲಯ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕೇರಳದ ಸಾಂಪ್ರದಾಯಿಕ ಓಣಂ ಹಬ್ಬದ ಆಚರಣೆಗೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಮಾತನಾಡಿದವರು.
ಓಣಂ ಕೇರಳದಲ್ಲಿ ವಿಜೃಂಭಣೆಯಿAದ ಆಚರಿಸಲಾಗುವ ಸಾಂಪ್ರದಾಯಿಕ ಸುಗ್ಗಿ ಹಬ್ಬವಾಗಿದೆ. ಬಿವಿವಿ ಸಂಘದ ವಿವಿಧ ನರ್ಸಿಂಗ್ ಕಾಲೇಜುಗಳಲ್ಲಿ ಕೇರಳದ ೭೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಸಮಯದ ಅಭಾವದಿಂದ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಕೇರಳಕ್ಕೆ ತೆರಳಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿಯೇ ಅದ್ದೂರಿಯಾಗಿ ಓಣಂ ಆಚರಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.
ಇಂತಹ ಆಚರಣೆಗಳ ಮೂಲಕ ಕರ್ನಾಟಕದ ವಿದ್ಯಾರ್ಥಿಗಳಿಗೆ ಅನ್ಯ ರಾಜ್ಯಗಳ ಸಂಪ್ರದಾಯ ಹಾಗೂ ಸಂಸ್ಕೃತಿಯ ಪರಿಚಯವಾಗುತ್ತದೆ. ಅದೇ ರೀತಿ ಕರ್ನಾಟಕದ ಹಬ್ಬಗಳು ಹಾಗೂ ರಾಜ್ಯೋತ್ಸವದಂತಹ ಕಾರ್ಯಕ್ರಮಗಳ ಮೂಲಕ ಅನ್ಯಭಾಷಿಕ ವಿದ್ಯಾರ್ಥಿಗಳಿಗೆ ಕನ್ನಡ ನಾಡಿನ ಸಂಸ್ಕೃತಿ ಮತ್ತು ವೈಶಿಷ್ಟ್ಯವನ್ನು ಪರಿಚಯಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಗಮನ ಸೆಳೆದ ಚಂಡಮದ್ದಳೆ, ಮೋಹಿನಿ ಅಟ್ಟಮ್ :
ಓಣಂ ಆಚರಣೆಯ ಸ್ವಾಗತಕ್ಕೆ ಕೇರಳದ ಪಾರಂಪರಿಕ ವಾದ್ಯವಾದ ಚಂಡಮದ್ದಳೆ ನುಡಿಸಲಾಯಿತು. ಸಜ್ಜಲಶ್ರೀ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರು ಸಾಂಪ್ರದಾಯಿಕ ಉಡುಗೆ ತೊಟ್ಟು ಓಣಂ ನೃತ್ಯವಾದ ತಿರುವಾದರಂ ಸಾಮೂಹಿಕ ನೃತ್ಯ ಪ್ರದರ್ಶಿಸಿದರು, ಮಹಾಬಲಿ ಹಾಗೂ ಮೋಹಿನಿ ಅಟ್ಟಮ್, ಚಂಡಿಮೇಳ, ನೃತ್ಯ ಪ್ರದರ್ಶನಗಳು ವಿಶೇಷ ಆಕಷÀðಣೆಯಾಗಿದ್ದವು. ಕಲಾವಿದರ ತಂಡ ಹಾಗೂ ವಿದ್ಯಾರ್ಥಿನಿಯರಿಂದ ಶಿವಾಲಯದಿಂದ ಸಜ್ಜಲಶ್ರೀ ನರ್ಸಿಂಗ್ ವಿಜ್ಞಾನ ಮಹಾವಿದ್ಯಾಲಯದವರೆಗೆ ಅದ್ದೂರಿ ಮೆರವಣಿಗೆ ನಡೆಯಿತು. ಬಳಿಕ ಕೇರಳದ ವಿವಿಧ ಬಗೆಯ ಸಾಂಪ್ರದಾಯಿಕ ಓಣಂ ಖಾದ್ಯಗಳನ್ನು ಸವಿದು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸಂಭ್ರಮಿಸಿದರು. ಕೇರಳದಿಂದಲೇ ಬಾಣಸಿಗರು ಆಗಮಿಸಿ ವಿಶೇಷ ಖಾದ್ಯಗಳನ್ನು ತಯಾರಿಸಿದ್ದು ವಿಶೇಷವಾಗಿತ್ತು.
ಕಾರ್ಯಕ್ರಮದಲ್ಲಿ ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ , ನರ್ಸಿಂಗ್ ಕಾಲೇಜುಗಳ ಪ್ರಾಚಾರ್ಯ ಡಾ. ದಿಲೀಪ್ ನಾಟೆಕರ್, ಡಾ. ಜಯಶ್ರೀ ಈಟ್ಟಿ, ಡಾ. ಪ್ರವೀಣ ಪಾಟೀಲ, ಮೆಡಿಕಲ್ ಕಾಲೇಜಿನ ಉಪಪ್ರಾಚಾರ್ಯ ಡಾ. ಸಿ.ಎಸ್. ಹಿರೇಮಠ, ದಂತ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರವಿರಾಜ ದೇಸಾಯಿ, ವೈದ್ಯಕೀಯ ಅಽÃಕ್ಷಕ ಡಾ.ಶ್ರೀರಾಮ ಕೋರಾ, ಫಿಜಿಯೋಥೆರಪಿ ಕಾಲೇಜಿನ ಪ್ರಾಚಾರ್ಯ ಡಾ. ಮಹಾಂತೇಶ ಬಿರಡಿ ಇತರರು ಇದ್ದರು.