ಗ್ಯಾರಂಟಿ ಪರಿಷ್ಕರಣೆ ಅಗತ್ಯತೆ ಕುರಿತು ಚರ್ಚೆ ಮಾಡಬೇಕು: ಡಾ.ಪರಮೇಶ್ವರ|Guarantee Revision

Parameswar Crime11
Published on

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಅಗತ್ಯತೆಯ ಬಗ್ಗೆ ಚರ್ಚೆ ಮಾಡಬೇಕು(Need for guarantee revision should be discussed). ಸಾಧಕ-ಬಾಧಕಗಳನ್ನು ಚರ್ಚಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ(Dr G Parameswar) ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಬರೀ ಬಿಪಿಎಲ್ ಕಾರ್ಡ್‌ದಾರರಿಗೆ ಮಾತ್ರ ಎಂದು ಹೇಳಿರಲಿಲ್ಲ. ಚರ್ಚೆ ಮಾಡಿದ ಮೇಲೆ ಸರ್ಕಾರ ತೀರ್ಮಾನ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಂದ ಹೊರೆಯಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಡವರಿಗಾಗಿ ಯೋಜನೆಗಳನ್ನು ನೀಡಿದ್ದರಿಂದ ಹೊರೆಯಾಗಿದೆ? ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತದೆ ಎಂಬುದು ಗೊತ್ತಿತ್ತು. ಬಡವರಿಗಾಗಿ ಕೊಡುವ ಕಾರ್ಯಕ್ರಮಗಳಿಂದ ಹೊರೆಯಾಗಲೇಬೇಕು. ಈ ವಿಚಾರ ಗೊತ್ತಿದ್ದೆ ಮಾಡಿದ್ದೇವೆ ಎಂದು ಹೇಳಿದರು.

ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬೇಕಿಲ್ಲ. ಹೇಗಾದರು ಮಾಡಿ ಗ್ಯಾರಂಟಿ ಯೋಜನೆಗಳನ್ನು ಹತ್ತಿಕ್ಕಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಸ್ಪಷ್ಟನೆ:

ಗ್ಯಾರಂಟಿ ಯೋಜನೆಗಳನ್ನು ಬಿಪಿಎಲ್ ಕಾರ್ಡ್‌ದಾರರಿಗೆ ಮಾತ್ರ ಏಕೆ ನೀಡಬಾರದು ಎಂದು ತುರುವೆಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರು ತುಮಕುರು ಜಿಲ್ಲಾ ಕೆಡಿಪಿ ಸಭೆಯಲ್ಲಿ ಸಲಹೆ ನೀಡಿದರು. ವಿಪಕ್ಷದವರು ಸಲಹೆ ನೀಡಿದರೆ ಚರ್ಚೆ ಮಾಡುವುದಾಗಿ ಈ ವೇಳೆ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸ್ವಯಂಪ್ರೇರಿತವಾಗಿ ಅನೇಕ ಜನ ಗ್ಯಾರಂಟಿ ಯೋಜನೆಗಳನ್ನು ಬಿಡುತ್ತಿದ್ದಾರೆ. ಆದಾಯ ತೆರಿಗೆ ಪಾವತಿಸುವವರು, ಸರ್ಕಾರಿ ನೌಕರರು ಸೇರಿದಂತೆ ಬಹಳಷ್ಟು ಜನ ಬಿಟ್ಟಿದ್ದಾರೆ. ಅದನ್ನು ಮುಂದುವರಿದು ಬಡವರಿಗಾಗಿ ಮಾಡಬೇಕೆಂದು ಶಾಸಕ ಎಂ.ಟಿ.ಕೃಷ್ಣಪ್ಪ ಸಲಹೆ ಕೊಟ್ಟಿದ್ದಾರೆ ಎಂದು ಡಾ.ಪರಮೇಶ್ವರ ಹೇಳಿದರು.

ಗ್ಯಾರಂಟಿ ಯೋಜನೆಗಳು ನಮಗೆ ಹೊರೆ ಆಗಿಲ್ಲ. ಈಗಾಗಲೇ 2 ವರ್ಷ ಗ್ಯಾರಂಟಿ ಕೊಟ್ಟಿದ್ದೇವೆ. ಮುಂದಿನ ಮೂರು ವರ್ಷ ಕೂಡ ಗ್ಯಾರಂಟಿ ಕೊಡುತ್ತೇವೆ. ಮುಂದೆಯೂ ನಮ್ಮ ಸರ್ಕಾರವೇ ಬರುತ್ತದೆ. ಆಗಲೂ ಗ್ಯಾರಂಟಿಗಳು ಮುಂದುವರಿಯುತ್ತವೆ. ನಮ್ಮ ಸರ್ಕಾರಕ್ಕೆ ಯಾವುದೇ ಆರ್ಥಿಕ ಹೊರೆಯಿಲ್ಲ. ಒಂದು ವೇಳೆ ಗ್ಯಾರಂಟಿ ಪುನರ್ ಪರಿಶೀಲನೆ ಎಂದಾದರೆ ಅದನ್ನು ಮುಖ್ಯಮಂತ್ರಿಯವರೇ ನಿರ್ಧರಿಸಬೇಕು. -ಶಿವರಾಜ ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net