

ಇಂಗ್ಲೆಂಡ್: ಲಂಡನ್ ಬರೋ ಆಫ್ ಲ್ಯಾಂಬೆತ್‌ನ ಮಾಜಿ ಮೇಯರ್ ಆದ ಡಾ. ನೀರಜ್ ಪಾಟೀಲ್, ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಬ್ರಿಟಿಷ್ ಲೇಬರ್ ಪಾರ್ಟಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ (NEC) ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಲೇಬರ್ ಪಾರ್ಟಿ ಪ್ರಧಾನ ಕಾರ್ಯದರ್ಶಿಯಾದ ಡೇವಿಡ್ ಇವಾನ್ಸ್, 15ನೇ ಜುಲೈ 2024ರಂದು ಪ್ರಕಟಿಸಿದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಎನ್‌ಎಚ್‌ಎಸ್‌ನಲ್ಲಿ 28 ವರ್ಷಗಳ ಸೇವೆಯೊಂದಿಗೆ ಅಪಘಾತ ಮತ್ತು ತುರ್ತು ವೈದ್ಯಕೀಯ ಸಲಹೆಗಾರರಾದ ಡಾ. ಪಾಟೀಲ್ ಕಳೆದ 20 ವರ್ಷಗಳಿಂದ ಸಕ್ರಿಯವಾಗಿ ಕಾರ್ಮಿಕ ಪಕ್ಷದ ಸದಸ್ಯರಾಗಿದ್ದಾರೆ. ಸೇಂಟ್ ಥಾಮಸ್ ಆಸ್ಪತ್ರೆ ಮತ್ತು ಕಿಂಗ್ಸ್ ಕಾಲೇಜು ಆಸ್ಪತ್ರೆಯ ಫೌಂಡೇಶನ್ ಗವರ್ನರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಎಂಟು ವರ್ಷಗಳ ಕಾಲ ಲ್ಯಾಂಬೆತ್ ಕೌನ್ಸಿಲ್‌ನಲ್ಲಿ ಸೇವೆ ಸಲ್ಲಿಸಿರುವ ಡಾ. ನೀರಜ್ ಪಾಟೀಲ್, 2015ರಲ್ಲಿ ಬ್ರಿಟಿಷ್ ಸಂಸತ್ತಿನ ಎದುರು ಬಸವೇಶ್ವರ ಪ್ರತಿಮೆ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಪ್ರತಿಮೆಯನ್ನು ಭಾರತದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರಿಂದ ಅನಾವರಣಗೊಳಿಸಿದ್ದರು.