

ಬೆಂಗಳೂರು: ವೈದ್ಯಕಿಯ, ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್, ಜೆಇಇ ಹಾಗೂ ಸಿಇಟಿ ಮೊದಲಾದ ಪ್ರವೇಶ ಪರೀಕ್ಷೆಗಳಿಗೆ ಸರ್ಕಾರದ ವತಿಯಿಂದಲೇ ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಸರ್ಕಾರ ನಿರ್ಧರಿಸಿದೆ.
ರಾಜ್ಯದ ಆಯ್ದ ಸರ್ಕಾರಿ ಶಾಲೆಗಳಲ್ಲಿ ತರಬೇತಿ ನೀಡಲಾಗುವುದು ಎಂದು ಶಿಣ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ತಿಳಿಸಿದ್ದರು. ಅದರಂತೆ, ಒಟ್ಟು 25 ಸಾವಿರ ಮಕ್ಕಳಿಗೆ ತರಬೇತಿ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರ್ನಿಣಯ ಕೈಗೊಳ್ಳಲಾಗಿದೆ. ಇದಕ್ಕಾಗಿ ಅಂದಾಜು 12.50 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದು ಎಂದು ಮಾಹಿತಿ ನೀಡಲಾಗಿದೆ.
ಸರ್ಕಾರವೇ ನುರಿತ ಉಪನ್ಯಾಸಕರಿಂದ ತರಬೇತಿ ನೀಡಲಿದೆ. ಜತೆಗೆ, ವೃತ್ತಿಪರ ಕೋರ್ಸ್ಗಳಿಗೆ ಮೂಲಸೌಕರ್ಯ ನೀಡುವ ಹೊಣೆ ರಾಜ್ಯ ಸರ್ಕಾರದ್ದಾಗಿದೆ ಎಂದು ಮಧು ಬಂಗಾರಪ್ಪ ವಿವರ ನೀಡಿದ್ದರು.