ತೀವ್ರ ಕಣ್ಗಾವಲಿನಲ್ಲಿ ನೀಟ್ ಯುಜಿ ಮರುಪರೀಕ್ಷೆ

ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಎನ್‌ಟಿಎ ಜಿಲ್ಲೆಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಿ ಪ್ರತೀ ಪರೀಕ್ಷಾ ಕೇಂದ್ರದಲ್ಲೂ ಸ್ಥಳೀಯ ಪೊಲೀಸ್ ತಂಡವನ್ನು ನಿಯೋಜಿಸಲಾಗಿತ್ತು.
ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಎನ್‌ಟಿಎ ಜಿಲ್ಲೆಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಿ ಪ್ರತೀ ಪರೀಕ್ಷಾ ಕೇಂದ್ರದಲ್ಲೂ ಸ್ಥಳೀಯ ಪೊಲೀಸ್ ತಂಡವನ್ನು ನಿಯೋಜಿಸಲಾಗಿತ್ತು.
Published on
ಮಂಗಳೂರು: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಯ ನೀಟ್ ಯುಜಿ-2026 ಮರುಪರೀಕ್ಷೆಯು ದಕ್ಷಿಣ ಕನ್ನಡ ಜಿಲ್ಲೆಯ 12 ಕೇಂದ್ರಗಳಲ್ಲಿ ಭಾನುವಾರ ಅತ್ಯಂತ ಬಿಗು ಭದ್ರತೆ ಹಾಗೂ ಕಟ್ಟುನಿಟ್ಟಿನ ನಿಯಮಗಳ ನಡುವೆ ಯಶಸ್ವಿಯಾಗಿ ಜರುಗಿತು. ಮೇ ತಿಂಗಳ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಎರಡನೇ ಬಾರಿ ನಡೆದ ಈ ಪರೀಕ್ಷೆಯಲ್ಲಿ ಗೈರುಹಾಜರಾತಿ ಪ್ರಮಾಣ ಗಣನೀಯವಾಗಿ ಹೆಚ್ಚಿರುವುದು ಕಂಡುಬಂದಿದೆ.
ಜಿಲ್ಲೆಯಲ್ಲಿ ಪರೀಕ್ಷೆಗಾಗಿ ಒಟ್ಟು 5,570 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 4,343 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಬರೋಬ್ಬರಿ 1,227 ವಿದ್ಯಾರ್ಥಿಗಳು ಪರೀಕ್ಷೆಯಿಂದ ದೂರ ಉಳಿದಿದ್ದಾರೆ. ಹೊರ ಜಿಲ್ಲೆಗಳಿಂದ ಬಂದಿದ್ದ ಪೋಷಕರು ಮಕ್ಕಳೊಂದಿಗೆ ಒಂದು ದಿನ ಮುಂಚಿತವಾಗಿಯೇ ಮಂಗಳೂರಿಗೆ ಆಗಮಿಸಿದ್ದರು.
*ಭದ್ರತೆ ಮತ್ತು ಕಣ್ಗಾವಲು
ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಎನ್‌ಟಿಎ ಜಿಲ್ಲೆಗೆ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ಸ್ಥಳೀಯ ಪೊಲೀಸರೊಂದಿಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ 30 ಸದಸ್ಯರ ಸಶಸ್ತ್ರ ತಂಡವನ್ನು ನಿಯೋಜಿಸಲಾಗಿತ್ತು. ಅಲ್ಲದೆ, ಬಯೋಮೆಟ್ರಿಕ್ ಮುಖಚರ್ಯೆ ಪತ್ತೆ, ಸಿಸಿಟಿವಿ ಕ್ಯಾಮೆರಾ ಹಾಗೂ ಮೊಬೈಲ್ ಜಾಮರ್‌ಗಳಂತಹ ಆಧುನಿಕ ತಂತ್ರಜ್ಞಾನಗಳನ್ನು ಬಳಸಲಾಗಿತ್ತು. ಜಿಪಿಎಸ್ ನಿಗಾದಲ್ಲಿ ತರಲಾಗಿದ್ದ ಪ್ರಶ್ನೆಪತ್ರಿಕೆಗಳ ಪ್ಲಾಸ್ಟಿಕ್ ಪ್ಯಾಕೆಟ್‌ಗಳನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲೇ ತೆರೆಯಲಾಯಿತು.
ಹೆಚ್ಚುವರಿ ಸಮಯದ ಸೌಲಭ್ಯ
ಈ ಬಾರಿ ಸಾಮಾನ್ಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹೆಚ್ಚುವರಿಯಾಗಿ 15 ನಿಮಿಷಗಳನ್ನು ನೀಡಲಾಗಿತ್ತು (ಮಧ್ಯಾಹ್ನ 2:00 ರಿಂದ ಸಂಜೆ 5:15 ರವರೆಗೆ). ಇನ್ನು ವಿಕಲಚೇತನ ವಿದ್ಯಾರ್ಥಿಗಳಿಗೆ ಒಂದು ಗಂಟೆ ಹೆಚ್ಚಿನ ಸಮಯ ಕಲ್ಪಿಸಲಾಗಿತ್ತು. ಕಟ್ಟುನಿಟ್ಟಿನ ಉಡುಗೆ ನಿಯಮಗಳಿದ್ದ ಕಾರಣ, ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿ ಮಧ್ಯಾಹ್ನ 11:30 ರ ನಂತರವಷ್ಟೇ ಕೊಠಡಿಯೊಳಗೆ ಪ್ರವೇಶಿಸಲು ಅನುಮತಿಸಲಾಯಿತು. ಕೆಲವು ಶಿಕ್ಷಣ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಬಸ್ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಲ್ಪಿಸಿ ಬೆಂಬಲ ನೀಡಿದವು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net