ಸಂಕ್ರಾಂತಿ ಬಳಿಕ ಬೇಡಿಕೆ ಈಡೇರಿಸುವ ಭರವಸೆ; ಸಾರಿಗೆ ಮುಷ್ಕರ ಹಿಂಪಡೆದ ನೌಕರರು | KSRTC

dk (61)
Published on

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ KSRTC ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಡಿ.31ರಂದು ಕರೆ ನೀಡಿದ್ದ ಸಾರಿಗೆ ಮುಷ್ಕರವನ್ನು ಹಿಂಪಡೆಯಲಾಗಿದೆ ಎಂದು ಭಾನುವಾರ ಘೋಷಿಸಿವೆ.

ಇಂದು ಮುಖ್ಯಮಂತ್ರಿ ಕಾವೇರಿ ನಿವಾಸದಲ್ಲಿ ಕರೆದಿದ್ದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಮತ್ತು ಇಲಾಖೆಯು 4 ನಿಗಮಗಳ ವ್ಯವಸ್ಥಾಪಕರು ಭಾಗಿಯಾಗಿದ್ದರು. ನೌಕರರ ಸಮಸ್ಯೆ ಅಲಿಸಿದ ಸರ್ಕಾರ, ವಿವಿಧ ಬೇಡಿಕೆ ಈಡೇರಿಕೆಗೆ ಸಂಕ್ರಾತಿ ಬಳಿಕ ಮತ್ತೆ ಸಭೆ ಮಾಡುವುದಾಗಿ ಸಿಎಂ ತಿಳಿಸಿದ್ದಾರೆ. ಬೇಡಿಕೆ ಈಡೇರಿಸುವ ಬಗ್ಗೆ ಸಿಎಂ ಭರವಸೆ​ ಕೊಟ್ಟಿದ್ದಾರೆ ಎನ್ನಲಾಗಿದೆ. ಸಿಎಂ ಮನವಿ ಮೇರೆಗೆ ಮುಷ್ಕರ ಹಿಂಪಡೆದಿದ್ದಾರೆ.(ಹೆಚ್ಚಿನ ಮಾಹಿತಿ ನಿರೀಕ್ಷಿಸಿ)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net