ಓಲೇಕಾರ್​ಗೆ ಆಯೋಗ, ದುರ್ಯೋಧನಗೆ ಮಂಡಳಿ

neharu Olekar-Duryodhana Aihole
Published on

ಬೆಂಗಳೂರು: ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿ ನೆಹರು ಓಲೇಕಾರ್​ ಅವರಿಗೆ ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಪಂಗಡಗಳ ಆಯೋಗದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಅದೇ ರೀತಿ ಮಾಜಿ ಸಚಿವ ಎಂ.ಶಿವಣ್ಣಗೆ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಸ್ಥಾನ ಕರುಣಿಸಲಾಗಿದೆ.

ತನಗೆ ಸಚಿವ ಸ್ಥಾನ ನೀಡಲೇಬೇಕೆಂದು ಓಲೇಕರ್​ ಪಟ್ಟು ಹಿಡಿದು ಪಕ್ಷ ಮತ್ತು ಸಿಎಂ ಮೇಲೆ ಒತ್ತಡ ತಂತ್ರ ಅನುಸರಿಸಿದ್ದರು. ಆದರೆ ಲಂಬಾಣಿ ಸಮುದಾಯದಿಂದ ಪ್ರಭು ಚವಾಣ್​ಗೆ ಅವಕಾಶ ನೀಡಿದ್ದರಿಂದ ಒತ್ತಡ ಫಲ ನೀಡಿರಲಿಲ್ಲ. ಇದೀಗ ಆಯೋಗದ ಅಧ್ಯಕ್ಷ ಸ್ಥಾನ ನೀಡಿ ಸಮಾಧಾನ ಪಡಿಸುವ ಪ್ರಯತ್ನ ಮಾಡಲಾಗಿದೆ.

ರಾಯಭಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಮಾಯಕೊಂಡ ಶಾಸಕ ಪ್ರೊ.ಎನ್​. ಲಿಂಗಣ್ಣ ಅವರಿಗೆ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮ, ಸಿ.ಮುನಿಕೃಷ್ಣರಿಗೆ ಅಂಬೇಡ್ಕರ್​ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನದ ಅವಕಾಶ ನೀಡಲಾಗಿದೆ. ಈ ಮುನ್ನ ಐಹೊಳೆಯವರಿಗೆ ಅಂಬೇಡ್ಕರ್​ ಅಭಿವೃದ್ಧಿ ನಿಗಮ ನೀಡಲಾಗಿತ್ತು. ಕೊನೇ ಘಳಿಗೆಯಲ್ಲಿ ನಿಗಮ ಬದಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net