ನೆಹರು ಸ್ಮಾರಕ ಇನ್ಮುಂದೆ ಪಿಎಂ ಮ್ಯೂಸಿಯಂ..

PM museum
Published on

ನವದೆಹಲಿ: ರಾಷ್ಟ್ರ ರಾಜಧಾನಿಯ ತೀನ್ ಮೂರ್ತಿ ಭವನ ಆವರಣದಲ್ಲಿರುವ ನೆಹರು ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯನ್ನು ‘ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ’ ಎಂದು ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುಮು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಕ್ಯಾಬಿನೆಟ್ ಸಚಿವಾಲಯದ ಅಧಿಸೂಚನೆ ತಿಳಿಸಿದೆ.

ಆ.14ರಿಂದ ಅಧಿಕೃತವಾಗಿ ಹೆಸರು ಬದಲಾಗಿದೆ. ಪ್ರಜಾಪ್ರಭುತ್ವೀಕರಣ ಮತ್ತು ವೈವಿಧಿ್ಯಕರಣಕ್ಕೆ ಅನುಗುಣವಾಗಿ ಹೆಸರನ್ನು ಬದಲಾಯಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅಧ್ಯಕ್ಷತೆಯಲ್ಲಿ ಜೂನ್ 17ರಂದು ನಡೆದ ವಿಶೇಷ ಸಭೆಯಲ್ಲಿ ಈ ಸಂಸ್ಥೆಯ ಹೆಸರನ್ನು ಬದಲಾಯಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು.

ತೀನ್ ಮೂರ್ತಿ ಭವನವನ್ನು ಬ್ರಿಟಿಷರ ಆಳ್ವಿಕೆ ಸಂದರ್ಭದಲ್ಲಿ ನಿರ್ವಿುಸಲಾಗಿದ್ದು, ದೇಶ ಸ್ವಾತಂತ್ರ್ಯಾನಂತರ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಅಧಿಕೃತ ನಿವಾಸವಾಗಿತ್ತು. ನೆಹರೂ ಅವರು ಈ ನಿವಾಸದಲ್ಲಿ 16 ವರ್ಷಗಳಿಗೂ ಹೆಚ್ಚು ಕಾಲ ವಾಸವಾಗಿದ್ದರು. ನೆಹರೂ ಅವರ 75ನೇ ಜನ್ಮದಿನದ ನೆನಪಿಗಾಗಿ 1964ರಲ್ಲಿ ಈ ಭವನದಲ್ಲಿ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸ್ಥಾಪಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net