ನೇಕಾರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ! ಏನದು? ಇಲ್ಲಿದೆ ನೋಡಿ ಮಾಹಿತಿ…

Handlooming
Published on

ಬೆಂಗಳೂರು: ಕೈಮಗ್ಗ ನೇಕಾರರಿಗೆ ತಲಾ 5,000 ರೂ. ನೀಡುವ ನೇಕಾರ ಸಮ್ಮಾನ್ ಯೋಜನೆಗೆ ನಾಳೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿ. 16ರಂದು ಇದಕ್ಕೆ ಚಾಲನೆ ನೀಡಲಿದ್ದಾರೆ. ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆ (DBT) ಮುಖಾಂತರ ಪ್ರತಿ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು 5000 ರೂ.ಗಳಂತೆ ಒಟ್ಟು 2343.20 ರೂ. ನೇಕಾರರ ಬ್ಯಾಂಕ್‌ ಖಾತೆಗಳಿಗೆ ವರ್ಗಾವಣೆ ಮಾಡುವ ಯೋಜನೆ ಇದು. ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾಹಿತಿ ನೀಡಿದ್ದಾರೆ.

ಕೈಮಗ್ಗ ನೇಕಾರರ ಚಟುವಟಿಕೆಗಳ ಪಾರಂಪರಿಕ ಕಲೆ ಮತ್ತು ಅವರ ಶ್ರಮವನ್ನು ಪರಿಗಣಿಸಿ ಹಾಗೂ ಕೋವಿಡ್-19 ಮತ್ತು ಆರ್ಥಿಕ ಹಿನ್ನೆಡೆಯಿಂದ ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ 2020-21ನೇ ಸಾಲಿನಿಂದ ಅನ್ವಯವಾಗುವಂತೆ, 'ನೇಕಾರ ಸಮ್ಮಾನ್' ಎಂಬ ಹೊಸ ಯೋಜನೆಯನ್ನು ಮುಖ್ಯಮಂತ್ರಿ ಘೋಷಣೆ ಮಾಡಿದ್ದು, ಇದು ಕೈಮಗ್ಗ ನೇಕಾರರಿಗೆ ಸಹಾಯಕವಾಗಲಿದೆ ಎಂದು ಅವರು ತಿಳಿಸಿದ್ದಾರೆ.

2021-22 ನೇ ಸಾಲಿನಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿಯಲ್ಲಿ 49,544 ನೇಕಾರರಿಗೆ ರೂ.990.88 ಲಕ್ಷಗಳನ್ನು ಡಿ.ಬಿ.ಟಿ ಮೂಲಕ ಬಿಡುಗಡೆ ಮಾಡಲಾಗಿದೆ. 2022-23 ನೇ ಸಾಲಿನ ಆಯವ್ಯಯದನ್ವಯ ನೋಂದಾಯಿತ ಕೈಮಗ್ಗ ನೇಕಾರರಿಗೆ “ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ನೆರವನ್ನು ರೂ.2,000/- ಗಳಿಂದ ರೂ.5000ಕ್ಕೆ ಹೆಚ್ಚಿಸಿದೆ. ಇಲ್ಲಿಯವರೆಗೆ 46,864 ಅರ್ಜಿಗಳನ್ನು ಪರಿಶೀಲಿಸಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net