ಪದ್ಮಶ್ರೀ ಪುರಸ್ಕೃತ ಡಾ.ಅಶೋಕ್ ಪನಗರಿಯಾ ನಿಧನ

drpanagaiya
Published on

ಜೈಪುರ : ಪ್ರಮುಖ ನರರೋಗತಜ್ಞ ಮತ್ತು ಪದ್ಮಶ್ರೀ ಪುರಸ್ಕೃತರಾಗಿದ್ದ ಡಾ.ಅಶೋಕ್ ಪನಗರಿಯಾ ಅವರು ಕೋವಿಡ್ ನಂತರದ ವೈದ್ಯಕೀಯ ಸಮಸ್ಯೆಗಳಿಂದಾಗಿ ಇಂದು ನಿಧನ ಹೊಂದಿದ್ದಾರೆ. 71 ವರ್ಷ ವಯಸ್ಸಾಗಿದ್ದ ಡಾ. ಪನಗರಿಯಾ ಅವರು ಕಳೆದ ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ವೆಂಟಿಲೇಟರ್​ ಬೆಂಬಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ, ಡಾ.ಪನಗರಿಯಾ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳು ಬರುವ ತಲೆಮಾರುಗಳ ವೈದ್ಯರು ಮತ್ತು ಸಂಶೋಧಕರಿಗೆ ಉಪಯುಕ್ತವಾದುದು ಎಂದಿದ್ದಾರೆ.

ಕರೊನಾ ಸಾಂಕ್ರಾಮಿಕದ ಸಮಯದಲ್ಲಿ ಡಾ. ಪನಗರಿಯ ಅವರು ರಾಜಸ್ಥಾನದಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದು, ವೈದ್ಯಕೀಯ ತಜ್ಞರಾಗಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ಮರಿಸಿದ್ದಾರೆ. ಇಂಧನ ಸಚಿವ ಬಿ.ಡಿ.ಕಲ್ಲಾ, ಬಿಜೆಪಿ ರಾಜ್ಯ ಅಧ್ಯಕ್ಷ ಸತೀಶ್ ಪೂನಿಯಾ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ಇತರ ನಾಯಕರು ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net