200 ಕೋಟಿ ರೂ. ವೆಚ್ಚದಲ್ಲಿ ನೂತನ ಜಿಲ್ಲಾಡಳಿತ ಭವನ ನಿರ್ಮಾಣ

republic day
ಗಾಂಧೀಜಿ ಭಾವಚಿತ್ರಕ್ಕೆ ಸಚಿವ ಮಧು ಬಂಗಾರಪ್ಪ ಪುಷ್ಪನಮನ ಸಲ್ಲಿಸಿದರು. ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ ಇದ್ದರು.
Published on

ಶಿವಮೊಗ್ಗ: ಜಿಲ್ಲೆಯ ಜನರಿಗೆ ಅನುಕೂಲವಾಗಲು ನಗರದ ಹೃದಯ ಭಾಗದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗಳನ್ನು ಒಳಗೊಂಡ ನೂತನ ಜಿಲ್ಲಾಡಳಿತ ಭವನವನ್ನು 200 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಡಿಎಆರ್ ಮೈದಾನದಲ್ಲಿ ಭಾನುವಾರ ಜಿಲ್ಲಾ ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಶಿಕ್ಷಣ, ಸಂಪರ್ಕ, ಮಾರುಕಟ್ಟೆ ಪ್ರವಾಸೋದ್ಯಮ, ಕೈಗಾರಿಕೆ ಮತ್ತಿತರ ಕ್ಷೇತ್ರಗಳನ್ನೊಗೊಂಡು ಜಿಲ್ಲೆಯನ್ನು ಸರ್ವಾಂಗೀಣ ವಿಕಾಸಗೊಳಿಸುವ ಅಭಿಲಾಷೆ ಇದೆ ಎಂದರು.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ. 46 ಎಕರೆ ವಿಶಾಲ ಪ್ರದೇಶದಲ್ಲಿರುವ ಅಲ್ಲಮಪ್ರಭು ಉದ್ಯಾನದ ಅಭಿವೃದ್ಧಿಗೆ ಸರ್ಕಾರವು 5 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದ್ದು, ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಹೇಳಿದರು.

ಸೊರಬ ತಾಲೂಕಿನ ವರದಾ ನದಿಗೆ ಅಡ್ಡಲಾಗಿ ಸರಣಿ ಬ್ಯಾರೇಜ್ಗಳ ನಿರ್ಮಾಣಕ್ಕಾಗಿ 53 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಈ ಯೋಜನೆಯಿಂದ ನದಿ ಪಾತ್ರದ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net