

ಬೆಂಗಳೂರು: ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಯನ್ನು ಸರಳವಾಗಿ ಆಚರಣೆ ಆಗುವಂತೆ ನಿಗಾ ವಹಿಸಲು ಮುಂದಾಗಿರುವ ಸರ್ಕಾರ ಹಬ್ಬದ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.
ವಿಶೇಷವಾಗಿ ಕ್ರಿಸ್ಮಸ್ ಹಾಗೂ ಹೊಸವರ್ಷವನ್ನು ಸದ್ದುಗದ್ದಲ ಇಲ್ಲದೆ ನಡೆಯುವಂತೆ ಮಾಡುವ ಸಲುವಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಅದರಲ್ಲೂ ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನ ಅಥವಾ ಖಾಸಗಿ ಸ್ಥಳದಲ್ಲಿ ಆಚರಣೆಗೆ ಅವಕಾಶ ನೀಡಿದ್ದರೂ ಡಿಜೆ, ಆರ್ಕೆಸ್ಟ್ರಾ ಮತ್ತು ಸಮೂಹನೃತ್ಯಕ್ಕೆ ಅವಕಾಶ ಕೊಟ್ಟಿಲ್ಲ.
ಅಲ್ಲದೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್ಗಳು ಎಂದಿನಂತೆ ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸಬೇಕು. ಜತೆಗೆ ಸಿಬ್ಬಂದಿ ಆರ್ಟಿಪಿಸಿಆರ್ ನೆಗೆಟಿವ್ ಮತ್ತು 2 ಡೋಸ್ ಕೋವಿಡ್ ಲಸಿಕೆ ಕಡ್ಡಾಯವಾಗಿ ಪಡೆದು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದೆ.
ಅಷ್ಟು ಮಾತ್ರವಲ್ಲದೆ, ಸಾರ್ವಜನಿಕರು ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದಿರುವುದನ್ನು ಪ್ರದರ್ಶಿಸಿದ ನಂತರವೇ ಅವರಿಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್ಗಳ ಪ್ರವೇಶಕ್ಕೆ ಅವಕಾಶ ಕೊಡಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ.
ಡಿ. 30ರಿಂದ ಜ. 2ರವರೆಗೆ ಈ ನಿಯಮಗಳು ಜಾರಿಯಲ್ಲಿರುತ್ತವೆ. ಮತ್ತಷ್ಟು ನಿಯಮಗಳು ಈ ಕೆಳಗಿನಂತಿವೆ.