ಟ್ರೇಲರ್​ನಲ್ಲಿ ಸದ್ದು ಮಾಡುತ್ತಿದೆ ಯತಿರಾಜ್ ನಿರ್ದೇಶನದ 'ಸತ್ಯಂ ಶಿವಂ'

Untitled design - 2023-10-21T184746.697
Published on

ಬೆಂಗಳೂರು: ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ನಿರ್ದೇಶನದ ಸತ್ಯಂ ಶಿವಂ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಹಾಗೂ ಎರಡು ಹಾಡುಗಳ ಪ್ರದರ್ಶನ ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ನಿರ್ದೇಶಕ ದಯಾಳ್ ಪದ್ಮನಾಭನ್ ಮುಖ್ಯ ಅತಿಥಿಯಾಗಿ ಆಗಮಿಸಿ, ಶುಭ ಹಾರೈಸಿದರು.

ಚಿತ್ರದ ಬಗ್ಗೆ ಮಾತನಾಡಿದ ದಯಾಳ್, ತಮಿಳಿನ ಖ್ಯಾತ ನಿರ್ದೇಶಕ ಕೆ. ಬಾಲಚಂದರ್, ಕಲಾವಿದರ ಬಾಡಿ ಲಾಂಗ್ವೇಜ್ ಅನ್ನು ಪಾತ್ರವನ್ನಾಗಿಸಿ ಅಭಿನಯ ತೆಗೆಸುತ್ತಿದ್ದರು. ಅದೇ ಫಾರ್ಮುಲವನ್ನೇ ಯತಿರಾಜ್ ಅನುಸರಿಸಿದಂತೆ ಕಾಣುತ್ತದೆ ಎಂದು ಮಾರ್ಮಿಕವಾಗಿ ಹೇಳಿದರು.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ಯತಿರಾಜ್, "ಸತ್ಯಂ ಶಿವಂ" ಎಂದರೆ ಎರಡು ಪಾತ್ರಗಳ ಹೆಸರಲ್ಲ. ನಮ್ಮೊಳಗಿರುವ ಕೆಟ್ಟದ್ದನ್ನು ಹೊರಗೆ ಹಾಕಿ ನಿಶ್ಕಲ್ಮಶವಾದಾಗ ಸತ್ಯದ ದರ್ಶನವಾಗಿ ಶಿವನ ಅನುಭೂತಿಯಾಗುತ್ತದೆ. ಇದೇ ಕಥೆಯ ಸಾರಾಂಶ. ನಮ್ಮ ಚಿತ್ರದಲ್ಲಿ ಸಸ್ಪೆನ್ಸ್, ಥ್ರಿಲ್ಲರ್, ಸೆಂಟಿಮೆಂಟ್ ಎಲ್ಲವೂ ಇದೆ. ನಿರ್ಮಾಪಕರೂ ಆಗಿರುವ ಬುಲೆಟ್ ರಾಜು ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ ಎಂದರು.

ನಾನು ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರ ಸಹಕಾರದಿಂದ ಸತ್ಯಂ ಶಿವಂ ಉತ್ತಮವಾಗಿ ಮೂಡಿಬಂದಿದೆ ಎಂದರು. ಯತಿರಾಜ್ ನಿರ್ದೇಶನದಲ್ಲಿ ತಯಾರಾದ ಈ ಚಿತ್ರದ ಕಥೆ ಹಾಗೂ ನನ್ನ ಪಾತ್ರ ಎರಡೂ ಚೆನ್ನಾಗಿದೆ. ಯತಿರಾಜ್ ಅವರು ಹೇಳಿದ ಹಾಗೆ ಒಂದೇ ಹಂತದಲ್ಲಿ ಈ ಚಿತ್ರದ ಚಿತ್ರೀಕರಣ ಮುಗಿಸಿದ್ದಾರೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವುದಾಗಿ ಬುಲೆಟ್ ರಾಜು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net