ನೇಮಕಾತಿಗೆ ಹೊಸ ಅಧಿಸೂಚನೆ: ಆದೇಶ | Cabinet decision

Vidhanasoudha
Published on

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸೆ.4ರಂದು ತೆಗೆದುಕೊಂಡ ತೀರ್ಮಾನದಂತೆ ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ಧವಾಗಿ ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದು ಸೂಚಿಸಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ದಿನಾಂಕ: 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನೂ ಸಹ ರದ್ದುಗೊಳಿಸಬೇಕು.

ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದೂ ಸಹ ಹಾಗು ಕಾಲಬದ್ದವಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೂಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಆಯ್ಕೆ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net