ಎಸ್‌ಡಿಸಿಸಿಐಗೆ ನೂತನ ಪದಾಧಿಕಾರಿಗಳು

chembar ofcommerce
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಪದಾಧಿಕಾರಿಗಳೊಂದಿಗೆ ನಿಕಟಪೂರ್ವ ಅಧ್ಯಕ್ಷರಾದ ಎನ್.ಗೋಪಿನಾಥ್, ಟಿ.ಆರ್.ಅಶ್ವತ್ಥನಾರಾಯಣ ಶೆಟ್ಟಿ, ಕೆ.ವಿ.ವಸಂತಕುಮಾರ್, ಡಿ.ಎಂ.ಶಂಕರಪ್ಪ, ಜೆ.ಆರ್.ವಾಸುದೇವ್ ಮುಂತಾದವರಿದ್ದಾರೆ.
Published on

ಶಿವಮೊಗ್ಗ: ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ನೂತನ ಅಧ್ಯಕ್ಷರಾಗಿ ಬಿ.ಗೋಪಿನಾಥ್ ಆಯ್ಕೆಯಾಗಿದ್ದಾರೆ. ಇವರು 19 ವರ್ಷಗಳಿಂದ ಸಂಘದ ಸದಸ್ಯರಾಗಿದ್ದು, ನಾಲ್ಕು ವರ್ಷ ನಿರ್ದೇಶಕರಾಗಿ, ಐದು ವರ್ಷ ಕಾರ್ಯದರ್ಶಿ ಹಾಗೂ ಮೂರು ವರ್ಷ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸಂಘದ ಉಪಾಧ್ಯಕ್ಷರಾಗಿ ಜಿ.ವಿಜಯಕುಮಾರ್, ಎ.ಎಂ.ಸುರೇಶ್(ಕಾರ್ಯದರ್ಶಿ), ಕೆ.ಎಸ್.ಸುಕುಮಾರ್(ಜಂಟಿ ಕಾರ್ಯದರ್ಶಿ), ಆರ್.ಮನೋಹರ್ ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.

ಇದೇ ವೇಳೆ ವಿವಿಧ ಉಪಸಮಿತಿಗಳ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಅಡ್ವಾನ್ಸ್‌ಡ್ ಸ್ಕಿಲ್ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ವಸಂತ ಹೋಬಳಿದಾರ್, ರೈಲೆ ಅಭಿವೃದ್ಧಿ ಸಮಿತಿಗೆ ಎಸ್.ಎಸ್.ಉದಯಕುಮಾರ್, ಪ್ರವಾಸೋಧ್ಯಮ ಸಮಿತಿಗೆ ಪಿ.ರುದ್ರೆಶ್ ಅಧ್ಯಕ್ಷರಾಗಿರುತ್ತಾರೆ.
ಪ್ರದೀಪ್ ಯಲಿ(ಎಂಎಸ್‌ಎಂಇ ಮತ್ತು ಸರ್ಕಾರದ ಯೋಜನೆಗಳ ಜಾಗೃತ ಸಮಿತಿ), ಮಂಜೇಗೌಡ(ಸದಸ್ಯತ್ವ ಅಭಿವೃದ್ಧಿ ಸಮಿತಿ), ಗಣೇಶ ಅಂಗಡಿ(ಮೂಲಸೌಕರ್ಯ ಅಭಿವೃದ್ಧಿ ಸಮಿತಿ), ನರೇಂದ್ರ(ಎಕ್ಸ್‌ಪೋರ್ಟ್ ಮತ್ತು ಐಪಿ ಫೆಸಿಲಿಟೆಷನ್ ಸೆಂಟರ್ ಸ್ಟಾರ್ಟಪ್ ಇನ್ನೋವೇಟಿವ್ ಸಮಿತಿ), ವಿ.ಕೆ.ಜೈನ್ (ಟ್ರೇಡ್ ಫೆಸಿಲಿಟೆಷನ್ ಸಮಿತಿ), ಕೆ.ಎನ್.ರಾಜಶೇಖರ (ಎಪಿಎಂಸಿ ಮತ್ತು ಕೃಷಿ ಸಮಿತಿ), ಕಿರಣ್(ಕೈಗಾರಿಕಾ ಅಭಿವೃದ್ಧಿ ಸಮಿತಿ), ಶಿವಕುಮಾರ್ (ಪರಿಸರ ಸಮಿತಿ), ಎಸ್.ಪಿ.ಶಂಕರ(ಜಿಲ್ಲಾ ಮತ್ತು ತಾಲೂಕು ಅಭಿವೃದ್ಧಿ ಸಮಿತಿ), ಸಿ.ಎ.ಶರತ್(ಪ್ರೋಗ್ರಾಂ ಕಮಿಟಿ ಮತ್ತು ತೆರಿಗೆ ಸಮಿತಿ) ಹಾಗೂ ಮಹಿಳಾ ಅಭಿವೃದ್ಧಿ ಸಮಿತಿಗೆ ಲಕ್ಷ್ಮೀದೇವಿ ಗೋಪಿನಾಥ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net