ನವಜಾತ ಹೆಣ್ಣು ಮಗುವಿನ ಮೃತದೇಹ ಪತ್ತೆ! | Baby

baby
Published on

Baby : ಸರ್ಕಾರಿ ವೈದ್ಯಕೀಯ ಕಾಲೇಜಿನ ಸ್ನಾನಗೃಹದ ಬಳಿ ನವಜಾತು ಹೆಣ್ಣು ಶಿಶುವೊಂದು ಮೃತದೇಹ ಪತ್ತೆಯಾಗಿರುವ ಘಟನೆ ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ.

ವೈದ್ಯರ ಪ್ರಕಾರ ಮಗುವಿಗೆ ಸುಮಾರು 5-6 ತಿಂಗಳ ವಯಸ್ಸಾಗಿತ್ತು. ಭಾನುವಾರ (ಸೆ.28) ನೈರ್ಮಲ್ಯ ಮತ್ತು ಭದ್ರತಾ ತಪಾಸಣೆಯ ಸಮಯದಲ್ಲಿ ಶಿಶುವಿನ ಶವ ಸ್ನಾನಗೃಹದ ಬಳಿ ಸಿಬ್ಬಂದಿಗಳಿಗೆ ಕಂಡುಬಂದಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ತನ್ವೀರ್​ ಅಹ್ಮದ್​ ಹೇಳಿದ್ದಾರೆ.

ಮಗುವಿನ ಶವ ಪತ್ತೆಯಾದ ನಂತರ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮಗುವಿನ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇನ್ನು ಡಿಎನ್​ಎ ಮಾದರಿಗಳನ್ನು ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿ ತನಿಖೆ ಮುಂದುವರೆದಸಿದ್ದು, ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಆಸ್ಪತ್ರೆಯ ಭದ್ರತಾ ಕ್ರಮಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಹ್ಮದ್​ ಸುದ್ದಿಮೂಲಗಳಿಗೆ ತಿಳಿಸಿದ್ದಾರೆ.

ವಿಷಯವನ್ನು ಗಮನದಲ್ಲಿಟ್ಟುಕೊಂಡ ದೋಡಾ ಪೊಲೀಸರು, ಐಪಿಸಿ ಸೆಕ್ಸನ್​ 94 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮಗುವಿನ ಪಾಲಕರನ್ನು ಹುಡುಕುತ್ತಿದ್ದೇವೆ. ಹಾಗೇ ಪ್ರಕರಣದ ತನಿಖೆಯನ್ನು ಆರಂಭಿಸಿದ್ದು, ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net