ಕಸದ ತೊಟ್ಟಿಯಲ್ಲಿ ನವಜಾತ ಶಿಶು ಶವ ಪತ್ತೆ! ಕಣ್ಣೀರಿಟ್ಟ ಸ್ಥಳೀಯರು

Untitled design (31)
Published on

ನೋಯ್ಡಾ: ನವಜಾತ ಶಿಶುವಿನ ಶವವೊಂದು ಕಸದ ತೊಟ್ಟಿಯಲ್ಲಿ ಪತ್ತೆಯಾದ ವಿಷಯವನ್ನು ತಿಳಿದ ಪೊಲೀಸರು, ತಕ್ಷಣವೇ ಸ್ಥಳಕ್ಕೆ ಆಗಮಿಸಿ ಮಗುವಿನ ಮೃತದೇಹವನ್ನು ವಶಪಡಿಸಿಕೊಂಡಿದ್ದು, ತನಿಖೆಯನ್ನು ಚುರುಕುಗೊಳಿಸಿದ ಘಟನೆ ನೋಯ್ಡಾದ ಪಾಶ್ ಗ್ರೂಪ್ ಹೌಸಿಂಗ್ ಸೊಸೈಟಿಯಲ್ಲಿ ವರದಿಯಾಗಿದೆ.

ನವಜಾತ ಶಿಶುವಿನ ಗುರುತನ್ನು ಮತ್ತು ಪ್ರಕರಣಕ್ಕೆ ಸಂಬಂಧಿಸಿದವರನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ 2.30ರ ಸುಮಾರಿಗೆ ಸೆಕ್ಟರ್ 104ರ ಎಟಿಎಸ್ ಒನ್ ಹ್ಯಾಮ್ಲೆಟ್‌ನ ಗೋಪುರದ ನೆಲಮಾಳಿಗೆಯಲ್ಲಿ ಪತ್ತೆಯಾದ ಶಿಶುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಅದರ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ರವೇಂದ್ರ ಮಿಶ್ರಾ ಎಂಬುವವರು ಸೊಸೈಟಿಯ ಟವರ್ 7ರ ಎರಡನೇ ನೆಲಮಾಳಿಗೆಯಲ್ಲಿರುವ ಕಸ ಸಂಗ್ರಹ ಪ್ರದೇಶದಲ್ಲಿದ್ದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಕಂಡುಬಂದ ತಕ್ಷಣವೇ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು. ಸದ್ಯ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಆದರೆ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ" ಎಂದು ಜಿತೇಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net