NewDelhi ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಪ್ರಕರಣ; ಮೋದಿ ಸರ್ಕಾರದ ಅಸಮರ್ಥ ಆಡಳಿತವೇ ಕಾರಣ: ಕಾಂಗ್ರೆಸ್ ಆರೋಪ

NewDelhi Stampede
Published on

ನವದೆಹಲಿ: ನವದೆಹಲಿ (NewDelhi) ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಮೃತಪಟ್ಟಿದ್ದು, 10ಕ್ಕೂ ಅಧಿಕ ಜನ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯು ತನಿಖೆಗೆ ಆದೇಶಿಸಿದ್ದು, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.

ಇನ್ಣೂ ನವದೆಹಲಿ (NewDelhi) ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣವು ರಾಜಕೀಯ ಕೆಸರೆರಚಾಟಕ್ಕೆ ಆಸ್ಪದ ಮಾಡಿಕೊಟ್ಟಿದ್ದು, ಮೋದಿ ಸರ್ಕಾರದ ವೈಫಳ್ಯವೇ ಘಟನೆಗೆ ಕಾರಣ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ಧಾರೆ. ಈ ಸಂಬಂಧ ಸರಣಿ ಟ್ವೀಟ್​ಗಳನ್ನು ಮಾಡುವ ಮೂಲಕ ಕೇಂದ್ರ ಎನ್​ಡಿಎ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಕಾಲ್ತುಳಿತಕ್ಕೆ ಸಂಬಂಧಿಸಿದಮತೆ ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನವದೆಹಲಿ ರೈಲು ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ ಅನೇಕ ಜನರು ಮೃತಪಟ್ಟಿರುವ ವಿಚಾರ ಕೇಳಿ ತುಂಬಾ ನೋವಾಯಿತು. ಘಟನೆಯ ವಿಡಿಯೋಗಳು ಹೃದಯ ವಿದ್ರಾವಕವಾಗಿದ್ದು, ಘಟನೆಯಲ್ಲಿ ಮೃತರ ಸಂಖ್ಯೆಯನ್ನು ಬಹಿರಂಗಪಡಿಸದೆ ಕೇಂದ್ರ ಸರ್ಕಾರವು ಮರೆಮಾಚುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದ್ದು, ತಕ್ಷಣವೇ ಅದನ್ನು ಬಹಿರಂಗಪಡಿಸಿ ಎಂದು ಆಗ್ರಹಿಸಿದ್ಧಾರೆ.

ಈ ಕುರಿತು ಟ್ವೀಟ್​ ಮಾಡಿರುವ ಕಾಂಗ್ರೆಸ್ ನಾಯಕ ಕೆಸಿ. ವೇಣುಗೋಪಾಲ್, ನವದೆಹಲಿ (NewDelhi) ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತವನ್ನು ನೋಡಿದರೆ ಸರ್ಕಾರ ಸಂಪೂರ್ಣ ಅಸಮರ್ಥವಾಗಿದೆ ಮತ್ತು ಪಿಆರ್​ಗೆ ಮಾತ್ರ ಸಮರ್ಥವಾಗಿದೆ ಎಂಬುದನ್ನು ತೋರಿಸುತ್ತದೆ. ಮಹಾಕುಂಭದ ಬೆಳಕಿನಲ್ಲಿ ಈ ಜನಸಂದಣಿಯನ್ನು ನಿರೀಕ್ಷಿಸಬಹುದು ಎಂದು ಗೊತ್ತಿದ್ದರೂ ರೈಲ್ವೆ ಇಲಾಖೆ ಯಾಕೆ ಹೆಚ್ಚಿನ ರೈಲುಗಳನ್ನು ಬಿಟ್ಟಿಲ್ಲ ಎಂದು ಪ್ರಶ್ನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net