

ಹಾವೇರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ, ವಿಶೇಷ ಘಟಕ ಯೋಜನೆಯಡಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ್ಟ ಜಾತಿಯ ಅರ್ಹ ಅಭ್ಯಥಿರ್ಗಳಿಂದ 12 ತಿಂಗಳ ಅವಧಿಗೆ ಅಪ್ರೆಂಟಿಸ್ ತರಬೇತಿಗೆ ಅಜಿರ್ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ದತೆ ಹೊಂದಿರುವ ಪರಿಶಿಷ್ಟ ಜಾತಿಯ ಅಭ್ಯಥಿರ್ಗಳು ಅಪ್ರೆಂಟಿಸ್ ತರಬೇತಿಗೆ ಅಜಿರ್ ಸಲ್ಲಿಸಬಹುದಾಗಿದ್ದು, ಇಬ್ಬರು ಪರಿಶಿಷ್ಟ ಜಾತಿಯ ಅಭ್ಯಥಿರ್ಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು, ತರಬೇತಿ ಅವಧಿಯಲ್ಲಿ 15,000 ರೂ. ಸೈಪಂಡ್ ನೀಡಲಾಗುವುದು.
ಅರ್ಹ ಅಭ್ಯಥಿರ್ಗಳು ಅಗತ್ಯ ದಾಖಲೆಗಳೊಂದಿಗೆ ನ. 5ರೊಳಗೆ ಅಜಿರ್ ಸಲ್ಲಿಸಬೇಕು. ಅಜಿರ್ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾವೇರಿ, ದೂರವಾಣಿ ಸಂಖ್ಯೆ:08375-200330 ಅಥವಾ 9480841238ನ್ನು ಸಂಪಕಿರ್ಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.