ವಿತರಣೆಯಲ್ಲೇ ನಿತ್ಯವೂ ಆನಂದ

Gandhi_Bazaar (9)
Published on

ಎಲ್ಲರೂ ಬೆಳಗಿನ ಜಾವದ ಸವಿನಿದ್ರೆಯಲ್ಲಿ ಇರುವಾಗ ತಾವು ಮಾತ್ರ ಚಳಿ-ಮಳೆ ಲೆಕ್ಕಿಸದೆ ಮನೆಮನೆಗೆ ದಿನಪತ್ರಿಕೆಗಳನ್ನು ತಲುಪಿಸುವ ಶ್ರಮಜೀವಿಗಳು ಪತ್ರಿಕಾ ವಿತರಕರು. ಜಗತ್ತಿಗೆಲ್ಲ ವಾರಾಂತ್ಯ, ಹಬ್ಬ, ಹರಿದಿನಗಳೆಂಬ ಹತ್ತು-ಹಲವು ರಜೆ ಸಿಕ್ಕರೂ, ಇವರದು ಮಾತ್ರ ವರ್ಷ ಪೂರ್ತಿ ಬಿಡುವೇ ಇಲ್ಲದ

ಕಾಯಕ. ವಿತರಕರಿಲ್ಲದೆ ದಿನಪತ್ರಿಕೆಗಳಿಲ್ಲ ಎಂಬಷ್ಟರ ಮಟ್ಟಿಗೆ ಪತ್ರಿಕಾ ವ್ಯವಸ್ಥೆಗೆ ಇವರು ಅನಿವಾರ್ಯ ಬೆನ್ನೆಲುಬು. ಏಕೆಂದರೆ, ಪತ್ರಿಕೆಗಳನ್ನು ಎಷ್ಟು ಒಪ್ಪ-ಓರಣವಾಗಿ ಸಿದ್ಧಪಡಿಸಿದ ಬಳಿಕವೂ ಅದನ್ನು ಓದುಗರ ಮನೆಬಾಗಿಲಿಗೆ ತಲುಪಿಸುವ ಆಪದ್ಬಾಂಧವರು ಇವರೇ. ಮನೆಯಲ್ಲಿ ಮದುವೆ ಇರಲಿ, ಸೂತಕವಿರಲಿ, ವಿತರಕರು ಯಾವತ್ತೂ ತಮ್ಮ ಕಾಯಕ ತಪ್ಪಿಸುವವರಲ್ಲ. ಕರೊನಾ ಸಂಕಷ್ಟದ ಸಂದರ್ಭ ಇಡೀ ದೇಶವೇ ಲಾಕ್​ಡೌನ್ ಆಗಿದ್ದಾಗಲೂ ಮನೆ-ಮನೆಗೆ ಪತ್ರಿಕೆ ತಲುಪಿಸಿದ ವಾರಿಯರ್ಸ್ ಇವರು. ಶುಕ್ರವಾರ (ಸೆ.4) ಪತ್ರಿಕಾ ವಿತರಕರ ದಿನ. ಈ ಹಿನ್ನೆಲೆಯಲ್ಲಿ ಪತ್ರಿಕಾ ವಿತರಣೆಗೇ ತಮ್ಮ ಜೀವನ ಸಮರ್ಪಿಸಿಕೊಂಡು, ಹತ್ತಾರು ಮಂದಿಗೆ ಉದ್ಯೋಗದಾತರಾಗಿರುವ, ಈ ವೃತ್ತಿಯಿಂದಲೇ ಉತ್ತಮ ಬದುಕು ಕಟ್ಟಿಕೊಂಡು ಮಾದರಿ ಆಗಿರುವ ವಿತರಕ ಬಂಧುಗಳ ಯಶೋಗಾಥೆಯನ್ನು ನಾಡಿಗೆ ಪರಿಚಯಿಸುವ ಕಿರು ಪ್ರಯತ್ನ ಇಲ್ಲಿದೆ. ವಿಜಯವಾಣಿಯ ಎಲ್ಲ ವಿತರಕ ಬಾಂಧವರಿಗೆ ಪತ್ರಿಕಾ ವಿತರಕರ ದಿನ ಶುಭಾಶಯಗಳು.
ನಿತ್ಯಾನಂದ ಕಾಮತ್ ದಾವಣಗೆರೆ

ವ್ಯಾಪಾರ ಹಾಗೂ ಮಾರಾಟ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿ, 33 ವರ್ಷಗಳಿಂದ ಪತ್ರಿಕಾ ವಿತರಣೆಗೇ ಬದುಕನ್ನು ಮುಡಿಪಾಗಿಟ್ಟಿರುವ ದಾವಣಗೆರೆಯ ಕೆ. ನಿತ್ಯಾನಂದ ಕಾಮತ್ ಶ್ರದೆಟಛಿ-ಪರಿಶ್ರಮದಿಂದ ಎತ್ತರಕ್ಕೆ ಬೆಳೆದವರು. ಮೈಸೂರು ವಿಶ್ವವಿದ್ಯಾಲಯದಿಂದ 1984ರಲ್ಲಿ ಬಿಬಿಎಂ ಪದವಿ ಪಡೆದ ನಂತರ ತಮಿಳುನಾಡಿನ ಕೊಯಮತ್ತೂರಿನಲ್ಲಿ ಮಾರ್ಕೆಟಿಂಗ್ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದರು. ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದ ತಂದೆ ಉಮೇಶ ಕಾಮತ್​ಗೆ 1987ರಲ್ಲಿ ದಾವಣಗೆರೆಗೆ ವರ್ಗಾವಣೆಯಾದಾಗ ಕೆಲಸಕ್ಕೆ ರಾಜೀನಾಮೆ ನೀಡಿದ ನಿತ್ಯಾನಂದ ಕಾಮತ್, ಕೆಲ ತಿಂಗಳ ಮಟ್ಟಿಗೆ ದಾವಣಗೆರೆಯಲ್ಲಿ ಕಿರಾಣಿ ಅಂಗಡಿ ನಡೆಸಿದರು. ಕೆಲವೇ ದಿನಗಳಲ್ಲಿ ಪತ್ರಿಕಾ ವಿತರಣೆಯ ಜವಾಬ್ದಾರಿ ಅವರನ್ನು ಹುಡುಕಿಕೊಂಡು ಬಂತು. ಆರಂಭದ ದಿನಗಳಲ್ಲಿ ಇವರು 800 ಪತ್ರಿಕೆಗಳನ್ನು ಮನೆ ಮನೆಗೆ ಹೋಗಿ ಹಾಕುತ್ತಿದ್ದರು,

ಹತ್ತು ಹುಡುಗರು ಇವರೊಂದಿಗೆ ಕೈಜೋಡಿಸಿದರು. 2012ರಿಂದ ವಿಜಯವಾಣಿ ವಿತರಕರಾಗಿ ಸಾವಿರಾರು ಪ್ರತಿಗಳನ್ನು ಓದುಗರಿಗೆ ತಲುಪಿಸುತ್ತಿದ್ದಾರೆ. ಅನೇಕರು ಇವರ ಗರಡಿಯಲ್ಲಿ ಪಳಗಿ ಪತ್ರಿಕಾ ವಿತರಕರಾಗಿದ್ದಾರೆ. ಮತ್ತೆ ಕೆಲವರು ಈ ವೃತ್ತಿಯಿಂದ ಬೆಳೆದು ಬೇರೆ ರಂಗದಲ್ಲಿ ಭವಿಷ್ಯ ರೂಪಿಸಿಕೊಂಡಿದ್ದಾರೆ. ‘ಸಂಸ್ಥೆಯ ಚೇರ್ಮನ್ನರು, ಎಂಡಿ ಸೇರಿ ಎಲ್ಲರ ಪ್ರೋತ್ಸಾಹದಿಂದ ಈ ಹಂತಕ್ಕೆ ಬೆಳೆದಿದ್ದೇನೆ. ದೂರುಗಳು ಬರದಂತೆ ಸರಿಯಾದ ಸಮಯಕ್ಕೆ ಪತ್ರಿಕೆ ವಿತರಣೆ ಆಗುವಂತೆ ನೋಡಿಕೊಂಡಿದ್ದೇವೆ’ ಎನ್ನುತ್ತಾರೆ ಕಾಮತ್.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net