

ಬೆಂಗಳೂರು: ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಆ.2ರಿಂದ ಆ.6ರವರೆಗೆ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: ಸಿವಿಲ್ ಇಂಜಿನಿಯರ್ ನೇಮಕ ಪ್ರಕ್ರಿಯೆ ಗುಮಾನಿ
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಹಾಗೂ ರಾಯಚೂರಿನಲ್ಲಿ ಆ.3ರಂದು ಯೆಲ್ಲೋ ಅಲರ್ಟ್ ಇರಲಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಮುಂದಿನ 2 ದಿನ ಯೆಲ್ಲೋ ಅಲರ್ಟ್ ಇದ್ದರೆ ಆ.4ರಿಂದ ಆ.6ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.