

ನವದೆಹಲಿ: ನ್ಯೂಕ್ಲಿಯರ್ ಫ್ಯುಯೆಲ್ ಕಾಂಪ್ಲೆಕ್ಸ್ ಸಂಸ್ಥೆಯು ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸೆ.30ರೊಳಗೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹುದ್ದೆಯ ವಿವರ
ಒಟ್ಟು ಹುದ್ದೆ 206. ಐಟಿಐ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ. ಫಿಟ್ಟರ್, ರ್ಟನರ್, ಲ್ಯಾಬೊರೇಟರಿ ಅಸಿಸ್ಟೆಂಟ್, ಎಲೆಕ್ಟ್ರೀಷಿಯನ್, ಮೆಕ್ಯಾನಿಸ್ಟ್, ವೆಲ್ಡರ್ ಹಾಗೂ ಕಂಪ್ಯೂಟರ್ ಆಪರೇಟರ್ ಸಹಿತ ವಿವಿಧ ವಿಭಾಗಗಳಿಗೆ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ.
ವಿದ್ಯಾರ್ಹತೆ
ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಎಸ್ಎಸ್ಎಲ್ಸಿ ಮತ್ತು ಐಟಿಐನಲ್ಲಿ ತೇರ್ಗಡೆ ಹೊಂದಿರಬೇಕು.
ವಯೋಮಿತಿ, ವೇತನ
ಹುದ್ದೆಗೆ ಅರ್ಜಿಸಲ್ಲಿಸು ಅಭ್ಯರ್ಥಿಯ ವಯಸ್ಸು ಅರ್ಜಿಯ ಅಂತಿಮ ದಿನಾಂಕದಂದು ಅಂದರೆ ಸೆ. 30,2023 ಕ್ಕೆ 18 ವರ್ಷಕ್ಕಿಂತ ಕಡಿಮೆಯಿರಬಾರದು. ಹುದ್ದೆಗೆ ಅನ್ವಯವಾಗುವಂತೆ ಅಭ್ಯರ್ಥಿಗಳಿಗೆ ಕನಿಷ್ಠ 7,700ರೂ.& ಗರಿಷ್ಠ 8,050ರೂ. ಮಾಸಿಕ ವೇತನ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳನ್ನು ಮೆರಿಟ್ (ಅರ್ಹತಾ ಪರೀಕ್ಷೆಯ ಅಂಕಗಳ ಶೇಕಡಾವಾರು) ಮತ್ತು ಸಂದರ್ಶನದ ಆಧಾರದ ಮೇಲೆ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆ ?
ನ್ಯೂಕ್ಲಿಯರ್ ಫ್ಯುಯೆಲ್ ಕಾಂಪ್ಲೆಕ್ಸ್ಗೆ ಸಂಬಂಧಿಸಿದ ವೆಬ್ಸೈಟ್ಗೆ ಲಾಗಿನ್ ಮಾಡಿಕೊಳ್ಳಬೇಕು. ಆನ್ಲೈನ್ ನಮೂನೆಯ ಅರ್ಜಿ ದೊರೆಯಲಿದ್ದು, ಭರ್ತಿ ಮಾಡಿ ಕಳುಹಿಸಬೇಕು. ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳ ಅನುಸಾರ ಮೆರಿಟ್ ಆಧಾರದಲ್ಲಿ ಹಾಗೂ ನೇರ ಸಂದರ್ಶನ ಮೂಲಕ ಅಭ್ಯರ್ಥಿ ಆಯ್ಕೆ ನಡೆಯಲಿದೆ.