ಎನ್​ಎಚ್​ಎಐದಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗುವ ಅವಕಾಶ

NHAI JPG
Published on

ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 48 ಹುದ್ದೆಗಳಿವೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಜಿಎಟಿಇ 2020ರಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಗಳಿಸಿದ ಸ್ಕೋರ್​​ಗಳನ್ನು ಪರಿಗಣಿಸಲಾಗುತ್ತದೆ.

ಅಂಗೀಕೃತ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ಪದವಿ ಪೂರೈಸಿದ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿವಿಧ ಮೀಸಲಾತಿ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸೂಕ್ತ ವಯೋ ಸಡಿಲಿಕೆ ಇರುತ್ತದೆ. ಜೂನ್ 15 ರವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಎನ್​ಎಚ್​ಎಐ ವೆಬ್​ಸೈಟ್ https://nhai.gov.in ನೋಡಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net