ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನನ್ನು ಅರೆಸ್ಟ್​ ಮಾಡಿದ NIA

nia
Published on

ಬೆಂಗಳೂರು: ಶಂಕಿತ ಉಗ್ರನೊಬ್ಬನನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತನನ್ನು ಅಜೀಜ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಈತ ಹಿಜ್ಬ್-ಉತ್-ಥರೀರ್ ಭಯೋತ್ಪಾದಕ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ. ಈತ ಭಾರತದಲ್ಲಿ ಇಸ್ಲಾಮಿಕ್ ಕ್ಯಾಲಿಫೇಟ್ ಅನ್ನು ಸ್ಥಾಪಿಸುವ ಗುರಿಯನ್ನು ಹೊಂದಿದ್ದ ಎಂದು ವರದಿಯಾಗಿದೆ.

 ಅಜೀಜ್​ ಅಹ್ಮದ್​ ಶುಕ್ರವಾರ ಬೆಳಗ್ಗೆ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಸೌದಿಯ ಜಿದ್ದಾಗೆ ಪರಾರಿಯಾಗಲು ಮುಂದಾಗಿದ್ದ. ಈತ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಶಂಕಿತ ಉಗ್ರ ಅಜೀಜ್​ ಅಹ್ಮದ್​​ನನ್ನು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net