ಬೆಂಗಳೂರು-ಕೋಲಾರದಲ್ಲಿ NIA ದಾಳಿ: ಮೂವರು ಶಂಕಿತ ಉಗ್ರರ ಬಂಧನ!

dk - 2025-07-08T220727.919
Published on

ಬೆಂಗಳೂರು: ಬೆಂಗಳೂರು ಮತ್ತು ಕೋಲಾರದಲ್ಲಿ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳವು (ಎನ್ಐಎ) ಉಗ್ರರಿಗೆ ನೆರವು ನೀಡುತ್ತಿದ್ದ ಆರೋಪದಡಿ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

ಬೆಂಗಳೂರು ಹಾಗೂ ಕೋಲಾರದ ಐದು ಕಡೆಗಳಲ್ಲಿ ದಾಳಿ ಮಾಡಿದ್ದು, ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ಡಾ. ನಾಗರಾಜ್, ಅದೇ ಜೈಲಿನ ಎಎಸ್ಐ ಆಗಿದ್ದ ಚಾಂದ್ ಪಾಷಾ ಅನೀಸ್ ಮತ್ತು ಫಾತಿಮಾ ಅವರನ್ನು ರಾಷ್ಟ್ರೀಯ ತನಿಖಾ ದಳವು ಬಂಧಿಸಿದೆ. ದಾಳಿ ವೇಳೆ 2 ವಾಕಿಟಾಕಿ, ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net