

ಬೆಂಗಳೂರು: ಕಚ್ಚಾ ಬಾಂಬ್ (IED) ಬಳಸಿ ರಾಜ್ಯಾದ್ಯಂತ ವಿದ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಆರೋಪದ ಮೇಲೆ ಶಂಕಿತ ಉಗ್ರ ಸೇರಿದಂತೆ ರಾಷ್ಟ್ರೀಯ ತನಿಖಾ ದಳ ಎಂಟು ಮಂದಿಯನ್ನು ವಶಕ್ಕೆ ಪಡೆದಿದೆ.
ಕರ್ನಾಟಕ, ಮಹಾರಾಷ್ಟ್ರ, ಜಾರ್ಖಂಡ್ ಹಾಗೂ ದೆಹಲಿಯ 19 ಪ್ರದೇಶಗಳಲ್ಲಿ ಸೋಮವಾರ ದಾಳಿ ಮಾಡಿರುವ ಎನ್‌ಐಎ ಅಧಿಕಾರಿಗಳು, ಐಸಿಸ್ ಸಂಘಟಿತ ಸ್ಫೋಟದ ಸಂಚನ್ನು ವಿಫಲಗೊಳಿಸಿದ್ದಾರೆ.
ಬಂಧಿತರನ್ನು ಕರ್ನಾಟಕದ ಬಳ್ಳಾರಿ ಮೂಲದ ಮಿನಾಜ್ ಅಲಿಯಾಸ್ ಮೊಹಮ್ಮದ್ ಸುಲೈಮಾನ್, ಸೈಯದ್ ಸಮೀರ್, ಬೆಂಗಳೂರಿನ ಮೊಹಮ್ಮದ್ ಮುನಿರುದ್ದಿನ್, ಸೈಯದ್ ಸಮೀವುಲ್ಲಾ, ಮೊಹಮ್ಮದ್ ಮುಜಮಿಲ್, ಮುಂಬೈನ ಅನಾಸ್ ಇಕ್ಬಾಲ್ ಶೇಖ್, ದೆಹಲಿಯ ಶಿಯಾನ್ ರೆಹಮಾನ್ ಅಲಿಯಾಸ್ ಹುಸೇನ್ ಹಾಗೂ ಜಾರ್ಖಂಡ್‌ನ ಮೊಹಮ್ಮದ್ ಶಹಬಾಜ್ ಅಲಿಯಾಸ್ ಜುಲ್ಫಿಕರ್ ಅಲಿಯಾಸ್ ಗುಡ್ಡು ಎಂಬಾತನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ ನಗದು, ಸ್ಮಾರ್ಟ್ಫೋನ್ಗಳು, ಹರಿತವಾದ ಆಯುಧ, ಸಲ್ಫರ್, ಪೊಟ್ಯಾಸಿಯಮ್ ನೈಟ್ರೇಟ್, ಇದ್ದಿಲು, ಗನ್ ಪೌಡರ್, ಸಕ್ಕರೆ ಮತ್ತು ಎಥೆನಾಲ್ ದೊರೆತ್ತಿದ್ದು ಅಧಿಕಾರಿಗಳು ಅದನ್ನು ವಶಕ್ಕೆ ಪಡೆದಿದ್ದಾರೆ. ಇದಲ್ಲದೆ ಆರೋಪಿಗಳು ಕಾಲೇಜು ವಿದ್ಯಾರ್ಥಿಗಳಿಗೆ ಧರ್ಮದ ಹೆಸರಿನಲ್ಲಿ ಪ್ರಚೋದನೆ ನೀಡಿ ಅವರನ್ನು ಭಯೋತ್ಪಾದಕ ಕೃತ್ಯಗಳಿಗೆ ನಿಯೋಜಿಸುತ್ತಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಶಂಕಿತರು ಜಿಹಾದ್, ಖಿಲಾಫತ್ನೊಟ್ಟಿಗೆ ಶಂಕಿತರು ಸಂಘಟಿತರಾಗಿದ್ದರು ಎಂದು ವರದಿಯಾಗಿದೆ.