ಭಯೋತ್ಪಾದನಾ ಚಟುವಟಿಕೆ: ಕಾಶ್ಮೀರದ 9 ಕಡೆ ಎನ್​ಐಎ ದಾಳಿ

nia
Published on

ಶ್ರೀನಗರ: ಭಯೋತ್ಪಾದನಾ ಚಟುವಟಿಕೆ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಅಧಿಕಾರಿಗಳು ಸೋಮವಾರ ಶ್ರೀನಗರ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ 9 ಕಡೆ ದಾಳಿ ನಡೆಸಿದ್ದಾರೆ.

ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ 9 ಸ್ಥಳಗಳಲ್ಲಿ ಭದ್ರತಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪಾಕಿಸ್ತಾನ್​ ಮೂಲದ ಉಗ್ರಗಾಮಿ ಸಂಘಟನೆಗಳಾದ ಲಷ್ಕರ್ ಎ ತಯ್ಬಾ, ಜೈಷ್ ಎ ಮೊಹಮ್ಮದ್, ಹಿಬ್ಬುಲ್ ಮುಜಾಹಿದ್ದೀನ್, ಅಲ್ ಬದರ್, ಅಲ್ ಖೈದಾಗಳು ರೂಪಿಸಿರುವ ವಿಧ್ವಂಸಕ ಕೃತ್ಯಗಳನ್ನು ತಡೆಯಲು ಎನ್ ಐಎ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ರೂಪುಗೊಂಡಿರುವ ರೆಸಿಸ್ಟೆನ್ಸ್ ಫ್ರಂಟ್, ಯುನೈಟೆಡ್ ಲಿಬರೇಶನ್ ಫ್ರಂಟ್ ಜಮ್ಮು ಮತ್ತು ಕಾಶ್ಮೀರ, ಮುಜಾಹಿದ್ದೀನ್ ಗಜ್ಞಾತ್ ಉಲ್ ಹಿಂದ್, ಜಮ್ಮು ಮತ್ತು ಕಾಶ್ಮೀರ ಫ್ರೀಡಂ ಫೈಟರ್ಸ್, ಕಾಶ್ಮೀರ್ ಟೈಗರ್ಸ್ ಮತ್ತಿತರ ಸಂಘಟನೆಗಳ ಸಂಚುಗಳನ್ನು ಭೇದಿಸಲು ಎಎನ್‌ಐ ಈ ಕಾರ್ಯಾಚರಣೆ ನಡೆಸುತ್ತಿದೆ.

ದಾಳಿ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net