ನೈಟ್ ಲ್ಯಾಂಡಿಂಗ್ ಕಾಮಗಾರಿ ಮತ್ತೆ ಆರಂಭ: ಬಿವೈಆರ್

b y raghavendra
ಬಿ.ವೈ.ರಾಘವೇಂದ್ರ, ಲೋಕಸಭಾ ಸದಸ್ಯ
Published on

ಶಿವಮೊಗ್ಗ: ಪ್ರತಿಕೂಲ ಹವಾಮಾನದ ಪರಿಣಾಮ ಪದೇಪದೆ ವಿಮಾನ ಲ್ಯಾಂಡಿಂಗ್ ಸಮಸ್ಯೆ ಎದುರಿಸುತ್ತಿದ್ದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಅಳವಡಿಕೆ ಕೆಲಸ ಮುಂದುವರಿಸಲು ಡಿಜಿಸಿಎ(ನಾಗರಿಕ ವಿಮಾನಯಾನ ನಿರ್ದೇಶನಾಲಯ) ಗ್ರೀನ್ ಸಿಗ್ನಲ್ ನೀಡಿದೆ.

ಈ ವಿಷಯ ತಿಳಿಸಿರುವ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ನೈಟ್ ಲ್ಯಾಂಡಿಂಗ್‌ಗೆ ಸಂಬಂಧಿಸಿದಂತೆ ಉಳಿದ ಕಾಮಗಾರಿಯನ್ನು ಮುಂದುವರಿಸಲು ಕರ್ನಾಟಕ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯುಟಿವ್ ಏಜೆನ್ಸಿಯಾಗಿರುತ್ತದೆ. ನೈಟ್ ಲ್ಯಾಂಡಿಂಗ್‌ಗೆ ಸಂಬಂಧಪಟ್ಟ ರೇಖಾಚಿತ್ರಗಳು, ವಿನ್ಯಾಸ್‌ಗಳನ್ನು ಡಿಜಿಸಿಎ ಪರಿಶೀಲಿಸಿ ಅನುಮೋದನೆ ನೀಡಿದೆ ಎಂದಿದ್ದಾರೆ.
ಈ ವರ್ಷ ಜನವರಿಯಲ್ಲಿ ನೈಟ್‌ಲ್ಯಾಂಡಿಂಗ್ ಅಳವಡಿಕೆ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಶೇ.65ರಷ್ಟು ಕಾಮಗಾರಿ ಪೂರ್ಣವಾಗಿತ್ತು. ಈಗ ಉಳಿದ ಕಾಮಗಾರಿಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಬಹುದಾಗಿದೆ. ಬಳಿಕ ಮತ್ತೊಮ್ಮೆ ಡಿಜಿಸಿಎ ಅಂತಿಮ ಕಾಮಗಾರಿಯನ್ನು ಪರಿಶೀಲಿಸಿ ಅನುಮೋದನೆ ನೀಡಬೇಕಾಗುತ್ತದೆ.
ಈ ಎಲ್ಲ ಪ್ರಕ್ರಿಯೆಗಳು ಇನ್ನು ನಾಲ್ಕು ತಿಂಗಳಲ್ಲಿ ಪೂರ್ಣಗೊಳ್ಳಲಿವೆ. ಚಳಿಗಾಲ ಆರಂಭಕ್ಕೂ ಮುನ್ನ ನೈಟ್ ಲ್ಯಾಂಡಿಂಗ್ ವ್ಯವಸ್ಥೆ ಸೇವೆ ಲಭ್ಯವಾಗಲಿದೆ. ಇದರೊಂದಿಗೆ ವಿಮಾನಯಾನಕ್ಕೆ ಎದುರಾಗುತ್ತಿದ್ದ ಪ್ರತಿಕೂಲ ಹವಾಮಾನ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net