ನೈಟ್​ ಶಿಫ್ಟ್​ ಉದ್ಯೋಗಿಗಳ ಗಮನಕ್ಕೆ.. ಯಾವುದಕ್ಕೂ ಇದು ನಿಮ್ಮ ಜತೆಗಿರಲಿ..

Night
Published on

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕರೊನಾ ಸೋಂಕಿನ ತಡೆ ಹಾಗೂ ಪ್ರಕರಣಗಳ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಒಂದಾದ ಮೇಲೊಂದರಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೀಗ ಇಂದಿನಿಂದ ಕರೊನಾ ಕರ್ಫ್ಯೂ (ನೈಟ್ ಕರ್ಫ್ಯೂ) ಕೂಡ ವಿಧಿಸಲು ಮುಂದಾಗಿದೆ.

ಕರೊನಾ ತಡೆ ಹಿನ್ನೆಲೆಯಲ್ಲಿ ಏ. 10ರಿಂದ 20ರ ವರೆಗೆ ರಾಜ್ಯದ ಎಂಟು ಪ್ರಮುಖ ನಗರಗಳಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರ ವರೆಗೆ ಕರ್ಫ್ಯೂ ವಿಧಿಸಲಾಗಿದೆ. ಹೀಗಾಗಿ ರಾತ್ರಿಪಾಳಿಯ ನೌಕರರಿಗೆ ಕೆಲವು ಷರತ್ತುಗಳ ಮೇಲೆ ಕೆಲಸಕ್ಕೆ ಹೋಗಿ ಬರಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ರಾತ್ರಿಪಾಳಿಯ ಕೆಲಸಗಾರರನ್ನು ಕರೆದೊಯ್ಯುವ ಸಂಸ್ಥೆಯ ವಾಹನಗಳಲ್ಲಿ ಆ ಸಂಬಂಧ ಆಯಾ ಕಂಪನಿಗಳಿಂದ ಅಧಿಕೃತ ಪತ್ರ ಇರಬೇಕು. ರಾತ್ರಿ ಪಾಳಿಯ ಕೆಲಸದ ಮೇಲೆ ಓಡಾಡುವ ನೌಕರರು ತಮ್ಮ ಕಂಪನಿಗಳಿಂದ ನೀಡಲಾಗಿರುವ ಗುರುತಿನ ಚೀಟಿಯನ್ನು ಹೊಂದಿರಬೇಕು. ಜತೆಗೆ ಸಂಚಾರ ವೇಳೆ ಕೋವಿಡ್ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಬೇಕು. ಮಾಸ್ಕ್​ ಧರಿಸಿರಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಇಂದು ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net