ಇದು ನನ್ನ ಪುಣ್ಯ...ಶ್ರೀರಾಮನ ಜನ್ಮಭೂಮಿಯಲ್ಲಿ ಬರ್ತ್​​ಡೇ ಸಲೆಬ್ರೇಟ್​​ ಮಾಡಿದ ನಿಖಿಲ್​​

Nikhil Kumaraswamy
Published on

ಬೆಂಗಳೂರು: ಅಯೋಧ್ಯೆಯ ರಾಮಮಂದಿರದಲ್ಲಿ ಇಂದು ಪ್ರತಿಷ್ಠಾಪನೆಗೊಳ್ಳುತ್ತಿರುವ ಶ್ರೀರಾಮನಿಗಾಗಿ ಇದ್ದ ಶತಮಾನಗಳ ಸಂಕಲ್ಪ ಈಡೇರುತ್ತಿದೆ. ಅಸಂಖ್ಯಾತ ಭಕ್ತರ ತಪಸ್ಸು, ತ್ಯಾಗ, ಬಲಿದಾನಕ್ಕೆ ತಕ್ಕ ಪ್ರತಿಫಲ ಸಿಗುತ್ತಿದೆ. ಈ ಪವಿತ್ರವಾದ ಅಯೋಧ್ಯೆಯಲ್ಲಿ ನಿಖಿಲ್​​ ಕುಮಾರಸ್ವಾಮಿ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಕುರಿತಾದ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​ ಆಗಿವೆ.

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಭವ್ಯ-ದಿವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮಲಲಾನ ಪ್ರತಿಷ್ಠಾಪನೆಯ ಇಂದು ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಗಣ್ಯರು, ಸಲೆಬ್ರೇಟಿಗಳು ಭಾಗವಹಿಸಲಿದ್ದಾರೆ.

ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಕುಮಾರಸ್ವಾಮಿ ವಿಮಾನದಲ್ಲಿ ಅಯೋಧ್ಯೆಗೆ ತೆರಳಿದರು. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಆಹ್ವಾನಿತರಲ್ಲಿ ನಿಖಿಲ್‌ ಕುಮಾರಸ್ವಾಮಿ ಕೂಡ ಒಬ್ಬರಾಗಿದ್ದಾರೆ. ಜನವರಿ (22) ಇಂದು ನಟ ನಿಖಿಲ್‌ ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದೆ. ಶ್ರೀರಾಮ ಜನ್ಮ ಭೂಮಿಯಲ್ಲಿಯೇ ನಿಇಲ್​ ಕುಮಾರಸ್ವಾಮಿ ಅವರು ಹುಟ್ಟುಹಬ್ಬವನ್ನು ಸೆಲೆಬ್ರೇಟ್​​ ಮಾಡಿದ್ದಾರೆ.

ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ದಿನವೇ ಪುಣ್ಯಭೂಮಿ ಅಯೋಧ್ಯೆಯಲ್ಲಿ ಜನ್ಮದಿನ ಆಚರಿಸಿಕೊಂಡಿದ್ದು, ನನ್ನ ಪುಣ್ಯ. ಈ ಸಂತೋಷದ ಗಳಿಗೆಯಲ್ಲಿ ತಾತ ದೇವೇಗೌಡ ಅವರು ಮತ್ತು ಅಜ್ಜಿ ಚೆನ್ನಮ್ಮ ಅವರು ಹಾಗೂ ತಂದೆಯವರಾದ ಕುಮಾರಸ್ವಾಮಿ ಅವರು ಜೊತೆಯಲ್ಲಿದ್ದಿದ್ದು, ಸಂಭ್ರಮ ಮತ್ತಷ್ಟು ಹೆಚ್ಚಿಸಿದೆ ಎಂದು ಬರೆದುಕೊಂಡು ಫೇಸ್​​ಬುಕ್​​ನಲ್ಲಿ ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net