

ಬೆಂಗಳೂರು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ.
ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಬೆನ್ಮಲ್ಲೇ ನಿಖಿಲ್ ಕುಮಾರಸ್ವಾಮಿ ಬಿಜೆಪಿ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.
ಭೇಟಿಯ ಬಗ್ಗೆ ನಿಖಿಲ್ ಕುಮಾರಸ್ವಾಮಿಯವರು ತನ್ನ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ ಎಂದು ನಿಖಿಲ್ ಹೇಳಿಕೊಂಡಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್- ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು ಎಂದು ಹೇಳಿದ್ದಾರೆ.
ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.