

ಬೆಂಗಳೂರು:
ಕಾಂಗ್ರೆಸ್ ಸರ್ಕಾರ 1800 ಕೋಟಿ ರೂ. ಲೂಟಿ ಮಾಡಲು ಯೋಜಿಸಿದ್ದು, ನೆಲಮಂಗಲ ಕೆರೆ ಕಟ್ಟೆಗಳಿಗೆ ಕೊಳಚೆ ನೀರನ್ನು ಹರಿಸಲು ಹೊರಟಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.
ನೆಲಮಂಗಲದ ಎಂವಿಎಂ ಕನ್ವೆನ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ, ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೆಲಮಂಗಲದ ಎಂವಿಎಂ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ-ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಅಧಿಕಾರಿಗಳ ಮೇಲೆ ಕಾಂಗ್ರೆಸ್ ಶಾಸಕರ ದೌರ್ಜನ್ಯ, ದಬ್ಬಾಳಿಕೆ ಮಿತಿ ಮೀರಿದೆ ಎಂದರು.
ನೆಲಮಂಗಲದ ಕೆರೆಗಳಿಗೆ ವೃಷಭಾವತಿ ಕೊಳಚೆ ನೀರು ಹರಿಸಲು ಬಿಡುವುದಿಲ್ಲ. ದೇವೇಗೌಡರು ಹಾಗೂ ಕುಮಾರಣ್ಣ ನೇತೃತ್ವದಲ್ಲಿ ಹೋರಾಟ ನಡೆಸುತ್ತೇವೆ ಎಂದು ಗುಡುಗಿದರು.
ಭದ್ರಾವತಿ ಶಾಸಕ ಸಂಗಮೇಶ್ ಅವರ ಪುತ್ರ ಬಸವೇಶ್ ಮಹಿಳಾ ಅಧಿಕಾರಿ ವಿರುದ್ಧ ಅವಾಚ್ಯವಾಗಿ ನಿಂದಿಸಿದ್ದಾರೆ ಅದೇ ರೀತಿ ನೆಲಮಂಗಲದಲ್ಲಿ ಅಧಿಕಾರಿಗಳ ಮೇಲೆ ದೌರ್ಜನ್ಯ, ದಬ್ಬಾಳಿಕೆ. ಹೆದರಿಸಿ ಬೆದರಿಸಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಶಾಸಕ ಶ್ರೀನಿವಾಸಯ್ಯ ವಿರುದ್ಧ ಕಿಡಿಕಾರಿದರು.
ಇಷ್ಟು ಕೋಟಿ ಕೊಡಿ ನಿಮಗೆ ಪೋಸ್ಟಿಂಗ್ ಕೊಡ್ತೀನಿ ಎಂದು ದೇವೇಗೌಡರು , ಕುಮಾರಣ್ಣ ಹಾಗೂ ಜೆಡಿಎಸ್ ಪಕ್ಷ ಕೆಟ್ಟತನದ ರಾಜಕಾರಣ ಮಾಡಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಶಾಸಕರುಗಳಿಗೇ ಅವರ ಸರ್ಕಾರದ ಮೇಲೆ ನಂಬಿಕೆ ಇಲ್ಲವಾಗಿದೆ. ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಕರ್ನಾಟಕದಿಂದ ಕಿತ್ತೆಸೆಯುತ್ತಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ವೃಷಭಾವತಿ ನದಿ ಪೈಪ್ ಲೈನ್ ಯೋಜನೆಗೆ 1800 ಕೋಟಿ ರೂ ದಾಖಲೆ ಪ್ರಮಾಣದ ಪರ್ಸೆಂಟೇಜ್ ಇದು. ಬೆಂಗಳೂರು ನಗರದ ಕೊಳೆಚೆ ನೀರನ್ನ 69 ಕೆರೆಗಳನ್ನ ತುಂಬಿಸಲು ಈ ಯೋಜನೆಯನ್ನ ಮಾಡಿಟ್ಟಿದ್ದಿರೋ? ಇಲ್ಲ ನಿಮ್ಮ ಜೇಬು ಗಳಿಗೆ ದುಡ್ಡು ತುಂಬಿಸಿಕೊಳ್ಳುವುದಕ್ಕಾ ಎಂದು ವಾಗ್ದಾಳಿ ನಡೆಸಿದರು.
69 ಕೆರೆಗಳಿಗೆ ಕೊಳಚೆ ನೀರನ್ನ ತುಂಬಿಸಿದರೆ ಮುಂಬರುವ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳನ್ನ ತಾಲೂಕಿನ ಜನತೆ ನೋಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಇದಕ್ಕೂ ಮುನ್ನ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಿದ ವೇಳೆ ತಾಲ್ಲೂಕಿನ ಜನತೆ ಬೃಹತ್ ಗಾತ್ರದ ಹೂವಿನ ಹಾರವನ್ನು ಹಾಕುವ ಮೂಲಕ ಸ್ವಾಗತಿಸಿ ನಂತರ ಸಹಸ್ರಾರು ಸಂಖ್ಯೆಯಲ್ಲಿ ಯುವಕರು ಬೈಕ್ ರ‌್ಯಾಲಿಯ ಮೂಲಕ ಪಟ್ಟಣಕ್ಕೆ ಆಗಮಿಸಿದ ಯುವ ನಾಯಕರಿಗೆ ದಾರಿಯುದ್ದಕ್ಕೂ ಸಾರ್ವಜನಿಕರು ಪಟಾಕಿ ಸಿಡಿಸಿ ಹೂವಿನ ಹಾರ ಹಾಕುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎ. ಮಂಜುನಾಥ್, ಮಾಜಿ ವಿಧಾನಪರಿಷತ್ ಸದಸ್ಯರಾದ ಈ.ಕೃಷ್ಣಪ್ಪ, ತಾಲ್ಲೂಕು ಅಧ್ಯಕ್ಷ ತಿಮ್ಮರಾಯಪ್ಪ, ಮುಖಂಡ ಜಯಣ್ಣ, ಭೈರೇಗೌಡ , ಶಿವರುದ್ರಣ್ಣ, ಮೋಹನ್ ಕುಮಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.