ದೇವೇಗೌಡರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

n1 (1)
Published on

ಬೆಂಗಳೂರು: ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಜೆಡಿಎಸ್-ಬಿಜೆಪಿ ಮೈತ್ರಿ, ಮುಂಬರುವ ಲೋಕಸಭೆ ಚುನಾವಣೆಗೆ ನಡೆದಿರುವ ಸಿದ್ಧತೆ, ಕ್ಷೇತ್ರ ಹಂಚಿಕೆ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

ಪಕ್ಷದ ಕಚೇರಿಯಲ್ಲಿ ವಿವಿಧ ಲೋಕಸಭೆ ಕ್ಷೇತ್ರಗಳ ಮುಖಂಡರ ಜತೆ ಸಭೆಗಳನ್ನು ನಡೆಸಿದ್ದು ಹಾಗೂ ಆ ಸಭೆಗಳ ಫಲಶ್ರುತಿ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಬಿಜೆಪಿ ರಾಷ್ಟ್ರೀಯ ನಾಯಕರ ಜತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ತೆರಳಿ ನಡೆಸಿರುವ ಚರ್ಚೆಗಳ ಮಾಹಿತಿಯನ್ನು ಹಂಚಿಕೊಂಡರು.

ಯಾವುದೇ ಸಂದರ್ಭದಲ್ಲಿಯೂ ಚುನಾವಣೆ ದಿನಾಂಕ ಘೋಷಣೆ ಆಗಬಹುದು. ಅದಕ್ಕೆ ಪಕ್ಷ ತಯಾರಿರಬೇಕು. ಯುವ ಜನತಾದಳ ಕಾರ್ಯಕರ್ತರನ್ನು ಪಕ್ಷದ ಕೆಲಸಕ್ಕೆ ತೊಡಗಿಸಬೇಕು. ಪಕ್ಷಕ್ಕೆ ಅವಿಶ್ರಾಂತವಾಗಿ ದುಡಿಮೆ ಮಾಡಬೇಕು ಎಂದು ದೇವೇಗೌಡರು ನಿಖಿಲ್ ಕುಮಾರಸ್ವಾಮಿಗೆ ಸೂಚಿಸಿದರು.

ಸರಣಿ ಸಭೆಗಳನ್ನು ಮುಂದುವರಿಸಬೇಕು. ಕಾರ್ಯಕರ್ತರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ತೊಡಗಿಸಿಕೊಳ್ಳುವಂತೆ ದೇವೇಗೌಡರು ಕಿವಿ ಮಾತು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net