

ಬೆಂಗಳೂರು: ಆರೋಗ್ಯ ಪ್ರಚಾರಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ವತಿಯಿಂದ ನೀಡಲಾಗುವ 2024ನೇ ಸಾಲಿನ ‘ನೆಲ್ಸನ್ ಮಂಡೇಲಾ ಪ್ರಶಸ್ತಿ’ಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಭಾಜನವಾಗಿದೆ.
ಜನರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಪ್ರಚಾರದಲ್ಲಿ ಗಮನಾರ್ಹ ಕೊಡುಗೆ ನೀಡಿದ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು 2019ರಲ್ಲಿ ಈ ಪ್ರಶಸ್ತಿ ಸ್ಥಾಪಿಸಲಾಯಿತು.
ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನದಲ್ಲಿ ಮುಂಚೂಣಿಯಲ್ಲಿರುವ ನಿಮ್ಹಾನ್ಸ್‌ನ ಧ್ಯೇಯವನ್ನು ಮುಂದುವರಿಸುವ ನಮ್ಮ ಸಂಕಲ್ಪವನ್ನು ಈ ಪ್ರಶಸ್ತಿ ಇನ್ನಷ್ಟು ಬಲಪಡಿಸಿದೆ ಎಂದು ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ ಹೇಳಿದ್ದಾರೆ.