PHOTO: ರೈಲ್ವೆ ನಿಲ್ದಾಣದಲ್ಲಿ ಕುಸಿದು ಬಿದ್ದ ಪಾದಚಾರಿ ಮೇಲ್ಸೇತುವೆ: ಒಂಬತ್ತು ಜನರಿಗೆ ಗಾಯ

train sta
Published on

ಭೋಪಾಲ್​: ರೈಲ್ವೆ ನಿಲ್ದಾಣದಲ್ಲಿ ಪಾದಚಾರಿ ಮೇಲ್ಸೇತುವೆಯ ಕೆಲ ಭಾಗ ಕುಸಿದು ಬಿದ್ದಿರುವ ಘಟನೆ ಭೋಪಾಲ್​ನ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಒಂಬತ್ತು ಜನರು ಗಾಯಾಳುಗಳಾಗಿರುವುದಾಗಿ ವರದಿಯಾಗಿದೆ.

ಇಂದು ಬೆಳಗ್ಗೆ 9 ಗಂಟೆಯ ಸಮಯಕ್ಕೆ ಭೋಪಾಲ್​ ರೈಲ್ವೆ ನಿಲ್ದಾಣದ ಮೂರನೇ ಪ್ಲಾಟ್​ಫಾರಂ ಸಮೀಪದ ಪಾದಚಾರಿ ಮೇಲ್ಸೇತುವೆಯ ಕೆಲ ಭಾಗ ಕುಸಿದು ಬಿದ್ದಿದೆ. ಆಕಸ್ಮಿಕವಾಗಿ ನಡೆದ ಘಟನೆಯಿಂದಾಗಿ ಮೇಲ್ಸೇತುವೆಯ ಬಳಿ ಇದ್ದ ಒಂಬತ್ತು ಜನರಿಗೆ ಗಂಭೀರ ಗಾಯಗಳಾಗಿವೆ. ಸಹ ಪ್ರಯಾಣಿಕರ ಸಹಾಯದೊಂದಿಗೆ ತಕ್ಷಣವೇ ಗಾಯಾಳುಗಳನ್ನು ಆ್ಯಂಬುಲೆನ್ಸ್​ನಲ್ಲಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಮಧ್ಯ ಪ್ರದೇಶದ ಮುಖ್ಯಮಂತ್ರಿ ಕಮಲ್​ ನಾಥ್​, "ಭೋಪಾಲ್​ನ ರೈಲ್ವೆ ನಿಲ್ದಾಣದಲ್ಲಿ, ಪಾದಚಾರಿ ಮೇಲ್ಸೇತುವೆಯ ಒಂದು ಭಾಗ ಕುಸಿದಿರುವುದು ಒಂದು ದುರಂತ. ಅಪಘಾತದಲ್ಲಿ ಕೆಲವರು ಗಾಯಗೊಂಡಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂಬಂಧಪಟ್ಟ ಅಧಿಕಾರಿಗಳಿಗೆ ನೆರವು ನೀಡುವಂತೆ ನಿದೇರ್ಶಿಸಲಾಗಿದೆ" ಎಂದು ತಿಳಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net