ಬಿಜೆಪಿ ಶಾಸಕರ ವಿರುದ್ಧ ಸಿಡಿದೆದ್ದ ಕಾಗಿನೆಲೆ ಶ್ರೀಗಳು

Niranjanananda Puri Swamiji
Published on

ದಾವಣಗೆರೆ: ಸಚಿವ ಭೈರತಿ ಬಸವರಾಜ್ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿದ್ರೆ ಪರಿಣಾಮ ನೆಟ್ಟಗಿರಲ್ಲ ಎಂದು ಜಿಲ್ಲೆಯ ಬಿಜೆಪಿ ಶಾಸಕರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಹರಿಹರ ತಾಲೂಕಿನ ಬೆಳ್ಳೂಡಿಯ ಕನಕ ಗುರುಪೀಠದ ಶಾಖಾ ಮಠದಲ್ಲಿ ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರ ವಿರುದ್ಧ ಗರಂ ಆದ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನ ಬದಲಾಯಿಸಲು ನೋಡಿದ್ರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದರು.

ನೀವು ಬೇಕಾದ್ರೆ ಸಚಿವರಾಗಿ, ಆದ್ರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಅವರನ್ನ ಬದಲಾಯಿಸಲು ನೋಡಿದ್ರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ. ಈ ಬಗ್ಗೆ ನಾನು ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ನೇರ ಎಚ್ಚರಿಕೆ ನೀಡುವೆ ಎಂದು ನಿರಂಜನಾನಂದ ಪುರಿ ಸ್ವಾಮೀಜಿ ಗುಡುಗಿದರು.

ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿಯ ಐವರು ಶಾಸಕರು ಇದ್ದರೂ ಯಾರೊಬ್ಬರಿಗೂ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಅಸಮಾಧನದ ಚರ್ಚೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ನಿರಂಜನಾನಂದ ಪುರಿ ಸ್ವಾಮೀಜಿ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net