

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ತಿರಸ್ಕರಿಸಿದ ಬೆನ್ನಲ್ಲೇ ಇನ್ನೋರ್ವ ಆರೋಪಿ ಪವನ್ ಕುಮಾರ್ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾನೆ.
ದೆಹಲಿ ಪಟಿಯಾಲ ಕೋರ್ಟ್ ಜಾರಿ ಮಾಡಿರುವ ಡೆತ್ ವಾರಂಟ್ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾನೆ. ಈ ಮಧ್ಯೆ ತಿಹಾರ್ ಜೈಲು ಅಧಿಕಾರಿಗಳು ಅಪರಾಧಿಗಳಿಗೆ ಬ್ಯ್ಲಾಕ್ ವಾರಂಟ್ ಜಾರಿ ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ.