ಕ್ಷಮಾದಾನ ಅರ್ಜಿಯಲ್ಲಿ ಸಾಂವಿಧಾನಿಕ ಅಕ್ರಮ ಆರೋಪ: ನಿರ್ಭಯಾ ಅಪರಾಧಿ ಮತ್ತೆ ಕೋರ್ಟ್​ಗೆ

Nirbhaya
Published on

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆೆಗೆ ಗುರಿಯಾಗಿರುವ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮಾ ಮತ್ತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾನೆ.

ತನ್ನ ಕ್ಷಮಾದಾನ ಅರ್ಜಿ ತಿರಸ್ಕರಿಸುವಲ್ಲಿ ರಾಷ್ಟ್ರಪತಿ ಭವನದಿಂದ ಪ್ರಕ್ರಿಯಾ ಲೋಪ ಹಾಗೂ ಸಾಂವಿಧಾನಿಕ ಅಕ್ರಮ ಎಸಗಲಾಗಿದೆ ಎಂದು ದೂರಿದ್ದಾನೆ. ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ರಾಷ್ಟ್ರಪತಿಗೆ ಕಳಿಸಿದ ಶಿಫಾರಸಿನಲ್ಲಿ ದೆಹಲಿ ಗೃಹ ಸಚಿವ ಸತ್ಯೇಂದ್ರ ಜೈನ್​ರ ಸಹಿಯಿರಲಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಕೆಲವು ದಿನಗಳ ಹಿಂದೆ ದೆಹಲಿ ಲೆಫ್ಟಿನೆಂಟ್ ಗವರ್ನರ್​ಗೆ ಅರ್ಜಿ ಸಲ್ಲಿಸಿರುವ ಶರ್ವ, ಗಲ್ಲುಶಿಕ್ಷೆಯನ್ನು ಜೀವಾವಧಿಗೆ ಇಳಿಸುವಂತೆ ಕೋರಿದ್ದಾನೆ. ನಾಲ್ಕೂ ಅಪರಾಧಿಗಳನ್ನು ಮಾರ್ಚ್ 20ರಂದು ಗಲ್ಲಿಗೇರಿಸುವಂತೆ ವಿಚಾರಣಾ ನ್ಯಾಯಾಲಯ ಮಾರ್ಚ್ 5ರಂದು ಹೊಸ ಡೆತ್ ವಾರಂಟ್ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net