ಗಡ್ಕರಿ ಮಹತ್ವದ ಘೋಷಣೆ.. ಎಲೆಕ್ಟ್ರಿಕ್ ವಾಹನಗಳ ಬೆಲೆ ಏರಿಕೆ?

Nitin Gadkari
Published on

ನವದೆಹಲಿ: ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳು(ಇವಿ) ಬೆಲೆಗಳು ಶೀಘ್ರದಲ್ಲೇ ಹೆಚ್ಚಾಗುವ ಸಾಧ್ಯತೆಯಿದೆ. ಏಕೆಂದರೆ ಈ ವಾಹನಗಳಿಗೆ ಸರ್ಕಾರದ ಸಬ್ಸಿಡಿ ಅಗತ್ಯವಿಲ್ಲ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಬೇಡಿಕೆ ಹೆಚ್ಚಳ ಹಾಗೂ ಉತ್ಪಾದನಾ ವೆಚ್ಚ ತಗ್ಗಿರುವುದರಿಂದ ಇನ್ನು ಮುಂದೆ ಸಬ್ಸಿಡಿ ಅಗತ್ಯವಿಲ್ಲ ಎಂದು ದೆಹಲಿಯಲ್ಲಿ ನಡೆದ ಬ್ಲೂಮ್‌ಬರ್ಗ್ ಎನ್‌ಇಎಫ್ ಶೃಂಗಸಭೆಯಲ್ಲಿ ಗಡ್ಕರಿ ಇದನ್ನು ಹೇಳಿದ್ದಾರೆ.

ಆರಂಭಿಕ ವೆಚ್ಚ ಹೆಚ್ಚಾಗಿತ್ತು, ಆದರೆ ಬೇಡಿಕೆ ಹೆಚ್ಚಿದಂತೆ ಉತ್ಪಾದನಾ ವೆಚ್ಚ ಕಡಿಮೆಯಾಯಿತು ಎಂದು ಅವರು ಅಭಿಪ್ರಾಯಪಟ್ಟರು.

ಎಲೆಕ್ಟ್ರಿಕ್ ವಾಹನಗಳಿಗೆ ಈಗಾಗಲೇ ಉತ್ತಮ ತೆರಿಗೆ ರಿಯಾಯಿತಿ ಇದೆ. ಇವುಗಳ ಮೇಲಿನ ಜಿಎಸ್‌ಟಿ ಕೇವಲ ಶೇ.5 ಆಗಿದೆ. ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಗೆ ಹೋಲಿಸಿದರೆ ಇದು ಬಹಳಷ್ಟು ಪ್ರಯೋಜನಕಾರಿಯಾಗಿದೆ. ಇನ್ನು ಮುಂದೆ ಸಬ್ಸಿಡಿ ಬೇಡಿಕೆ ನೀಡಲು ಬರುವುದಿಲ್ಲ ಎಂದು ಕೇಂದ್ರ ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಇನ್ನೂ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಅವಲಂಬಿತವಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಆದರೂ ಈ ವಾಹನಗಳ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುವ ಆಲೋಚನೆ ಸರ್ಕಾರಕ್ಕೆ ಇಲ್ಲ. ಪೆಟ್ರೋಲ್ ಡೀಸೆಲ್ ವಾಹನಗಳ ಅವಲಂಬನೆಯಿಂದ ಮಾಲಿನ್ಯದ ಪ್ರಮಾಣ ಹೆಚ್ಚುತ್ತಿದೆ ಮತ್ತು ಈ ಪ್ರಕ್ರಿಯೆಯಲ್ಲಿ ಎಲೆಕ್ಟ್ರಿಕ್ ಬಸ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ನಿತಿನ್ ಗಡ್ಕರಿ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net