ನಿತೀಶ್​ಕುಮಾರ್​ಗೆ ಉಪಪ್ರಧಾನಿ ಪಟ್ಟ; ಆಂಧ್ರಕ್ಕೆ ವಿಶೇಷ ಸ್ಥಾನಮಾನ: ಇಂಡಿಯಾ ಬಣದಿಂದ ಹೊಸ ದಾಳ

Rahul Nitish
Published on

ಮುಂಬೈ: ಎನ್​ಡಿಎ ಮೈತ್ರಿಕೂಟದ ಅಂಗ ಪಕ್ಷಗಳಾದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾ ದಳ (ಯುನೈಟೆಡ್) (ಜೆಡಿಯು) ತನ್ನತ್ತ ಸೆಳೆಯಲು ವಿರೋಧ ಪಕ್ಷಗಳ ನೇತೃತ್ವದ ಇಂಡಿಯಾ ಬಣವು ಮುಂದಾಗಿದೆ. ನಿತೀಶ್ ಕುಮಾರ್‌ಗೆ ಉಪ ಪ್ರಧಾನಿ ಪಟ್ಟ ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಆಮಿಷವನ್ನು ಅದು ಮುಂದೊಡ್ಡಿದೆ ಎಂದು ವರದಿಗಳು ಹೇಳಿವೆ.

ನಿತೀಶ್ ಕುಮಾರ್ ಅವರ ಜೆಡಿಯು ಪ್ರಸ್ತುತ 15 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದು, ಎನ್‌ಡಿಎ ಒಟ್ಟು 31 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಇಂಡಿಯಾ ಬ್ಲಾಕ್ 8 ರಲ್ಲಿ ಮುಂದಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್‌ಡಿಎ 40 ಸ್ಥಾನಗಳ ಪೈಕಿ 39 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ 17 ಸ್ಥಾನಗಳನ್ನು ಗೆದ್ದುಕೊಂಡಿತ್ತು, ಜೆಡಿಯು 16 ಸ್ಥಾನಗಳನ್ನು ಗಳಿಸಿತ್ತು. ಎಲ್​ಜೆಪಿ 6 ಸ್ಥಾನಗಳನ್ನು ಪಡೆದುಕೊಂಡಿತ್ತು. ಕಾಂಗ್ರೆಸ್ ಕೇವಲ ಒಂದು ಸ್ಥಾನವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ತೇಜಸ್ವಿ ಯಾದವ್ ನೇತೃತ್ವದ ಆರ್‌ಜೆಡಿ ಒಂದೇ ಒಂದು ಸ್ಥಾನ ಗೆಲ್ಲಲು ವಿಫಲವಾಗಿತ್ತು.

ಆದರೂ, 2014 ರ ಸಾರ್ವತ್ರಿಕ ಚುನಾವಣೆಗಳು ವಿಭಿನ್ನ ಸನ್ನಿವೇಶವನ್ನು ಪ್ರಸ್ತುತಪಡಿಸಿದವು. ಆ ಸಮಯದಲ್ಲಿ ಜೆಡಿಯು ಜತೆ ಮೈತ್ರಿ ಮಾಡಿಕೊಳ್ಳದ ಬಿಜೆಪಿ ಬಿಹಾರದಲ್ಲಿ 23 ಸ್ಥಾನಗಳನ್ನು ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಅದರ ಮಿತ್ರ ಪಕ್ಷ ಎಲ್‌ಜೆಪಿ 6 ಸ್ಥಾನಗಳನ್ನು ಗೆದ್ದಿತ್ತು. ಏಕಾಂಗಿಯಾಗಿ ಸ್ಪರ್ಧಿಸಿದ್ದ ಜೆಡಿಯು 2 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು.

ಮಹಾಘಟಬಂಧನ ಭಾಗವಾದ ಕಾಂಗ್ರೆಸ್ 2 ಸ್ಥಾನಗಳನ್ನು ಗೆದ್ದಿತ್ತು. ಈಗಿನ ಪರಿಸ್ಥಿತಿ 2019 ಕ್ಕೆ ಸಂಪೂರ್ಣವಾಗಿ ವ್ಯತಿರಿಕ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net