ದಾಂಪತ್ಯದಲ್ಲಿ ಬಿರುಕು; ಡೈವರ್ಸ್ ಮೊರೆ ಹೋದ್ರಾ ಚಂದನ್ ಶೆಟ್ಟಿ, ನಿವೇದಿತಾ​​

Chandan Niveditha
Published on

 ಬೆಂಗಳೂರು: ಸ್ಯಾಂಡಲ್​ವುಡ್​ನ ಕ್ಯೂಟ್​​ ಕಪ್​ ಎಂದೆ ಖ್ಯಾತಿ ಪಡೆದಿದ್ದ ಚಂದನ್, ನಿವೇದಿತಾ​​ ಡಿವೋರ್ಸ್‌ ಪಡೆದುಕೊಂಡಿದೆ ಎಂದು ವರದಿಯಾಗಿದೆ. ಆದರೆ ಈ ಕುರಿತಾಗಿ ದಂಪತಿ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ.

ಚಂದನ್ ಶೆಟ್ಟಿ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಡಿವೋರ್ಸ್ ಮೊರೆ ಹೋದ ಚಂದನ್ ಶೆಟ್ಟಿ ,ನಿವೇದಿತಾ ಗೌಡ ಕೆರಿಯರ್ ದೃಷ್ಟಿಯಿಂದ ಪರಸ್ಪರ ಒಪ್ಪಿಗೆ ಮೂಲಕ ವಿವಾಹ ವಿಚ್ಛೇದನ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಶಾಂತಿನಗರ ಕೋರ್ಟ್ ನಲ್ಲಿ ವಿಚ್ಛೇದನ ಪಡೆದು ಕೊಳ್ತಿರುವ ದಂಪತಿ.

ಬಿಗ್​ ಬಾಸ್​ ಕನ್ನಡ ಸೀಸನ್​ 5’ ರಿಯಾಲಿಟಿ ಶೋನಲ್ಲಿ ನಿವೇದಿತಾ ಗೌಡ ಹಾಗೂ ಚಂದನ್​ ಶೆಟ್ಟಿ ಅವರು ಸ್ಪರ್ಧಿಸಿದ್ದರು. ಅಲ್ಲಿಯೇ ಅವರಿಗೆ ಮೊದಲ ಬಾರಿಗೆ ಪರಿಚಯ ಆಗಿದ್ದು.2020ರ ಫೆಬ್ರವರಿಯಲ್ಲಿ ಹಸೆಮಣೆ ಏರಿದ್ದರು. ಚಂದನ್ ಶೆಟ್ಟಿ ಹಾಗೂ ಪತ್ನಿ ನಿವೇದಿತಾ ಗೌಡ ಆಗಾಗ ಒಟ್ಟಿಗೆ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net