

ಚೆನ್ನೈ: ಕೆಲವು ಸೆಲೆಬ್ರಿಟಿಗಳಿಗೂ ವಿವಾದಕ್ಕೂ ಎಲ್ಲಿಲ್ಲದ ನಂಟು ಎಂದು ಹೇಳಿದರೆ ತಪ್ಪಾಗಲಾರದು. ಸೆಲೆಬ್ರಿಟಿಗಳಿಗೆ ಸಂಬಂಧಿಸಿದ ಯಾವುದೇ ಸುದ್ದಿಯಾದರೂ ಅದು ಸಖತ್ ವೈರಲ್ ಆಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಬಹುಭಾಷಾ ನಟಿ ನಿವೇತಾ ಪೇತುರಾಜ್ ಅವರಿಗೆ ಸಂಬಂಧಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.
ನಟಿ ನಿವೇತಾ ಪೇತುರಾಜ್ ಸೌತ್ ಸಿನಿ ಇಂಡಸ್ಟ್ರಿಯ ಟಾಪ್ ಹೀರೋಯಿನ್ಗಳ ಪೈಕಿ ಒಬ್ಬರೆಂದರೆ ತಪ್ಪಾಗುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಅವರ ನಟನೆಯ ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ. ಆದರೆ, ಅವರಿಗೆ ಸಂಬಂಧಿಸಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದೆ.
ವೈರಲ್ ಆಗಿರುವ ವಿಡಿಯೋ ನೋಡುವುದಾದರೆ, ನಟಿ ನಿವೇತಾ ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವುದನ್ನು ನೋಡಬಹುದಾಗಿದೆ. ಪೊಲೀಸರು ನಿವೇತಾ ಅವರಿಗೆ ಕಾರಿನ ಡಿಕ್ಕಿ ತೆರೆಯುವಂತೆ ಸೂಚಿಸುತ್ತಾರೆ. ಇದಕ್ಕೆ ಆಕ್ಷೇಪಿಸುವ ನಟಿ ಕಾರಿನ ಟ್ರಂಕ್ ತೆರೆಯಲು ಸಾಧ್ಯವಿಲ್ಲ ಎಂದು ಹೇಳುತ್ತಾರೆ. ಈ ವೇಳೆ ಇದೇ ವಿಚಾರವಾಗಿ ಪೊಲೀಸರು ಹಾಗೂ ನಟಿಯ ನಡುವೆ ದೊಡ್ಡ ವಾಗ್ವಾದವೇ ಆಗಿ ಬಿಡುತ್ತದೆ. ಪೊಲೀಸರು ಮತ್ತು ನಿವೇತಾ ಅವರ ನಡುವಿನ ವಾಗ್ವಾದದ ದೃಶ್ಯವನ್ನು ರೆಕಾರ್ಡ್ ಮಾಡುತ್ತಿದ್ದ ವ್ಯಕ್ತಿಗೂ ಆ ಸಂದರ್ಭದಲ್ಲಿ ನಟಿ ತರಾಟೆಗೆ ತೆಗೆದುಕೊಳ್ಳುತ್ತಾರೆ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಬಿಡುಗಡೆಯಾದ 24 ಗಂಟೆಯಲ್ಲಿ 5ಲಕ್ಷಕ್ಕೂ ಅಧಿಕ ಭಾರಿ ವೀಕ್ಷಣೆಗೆ ಒಳಪಟ್ಟಿದೆ. ವಿಡಿಯೋದಲ್ಲಿ ಪೊಲೀಸರು ಕಾಲಿಗೆ ಕ್ರಾಕ್ಸ್ ಧರಿಸಿದ್ದ ಕಾರಣ ನೆಟ್ಟಿಗರು ಇದೆಲ್ಲಾ ಪಬ್ಲಿಸಿಟಿ ಸ್ಟಂಟ್ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಹೀಗಿದ್ದರೂ ನಟಿಯಾಗಲಿ ಅಥವಾ ಪೊಲೀಸ್ ಇಲಾಖೆಯಾಗಲಿ ಈ ವಿಡಿಯೋದ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.