ಜ.7ರಂದು ಎನ್‌ಎಂಎಂಎಸ್ ಪರೀಕ್ಷೆ

SSLC Exam
Published on

ಬೆಂಗಳೂರು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನಡೆಸುವ ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿವೇತನ (ಎನ್‌ಎಂಎಂಎಸ್) ಪರೀಕ್ಷೆಯನ್ನು 2024ರ ಜ.7ರಂದು ನಡೆಸಲಾಗುತ್ತಿದೆ.

ಕರ್ನಾಟಕ ಸಾಲಾ ಗುಣಮಟ್ಟ ಮೌಲ್ಯಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಡಿ.21ರಿಂದ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಡಿ.28 ರೊಳಗೆ ಶಾಲಾ ಮುಖ್ಯಸ್ಥರು ಮತ್ತು ಪ್ರಾಂಶುಪಾಲರು ಸಹಿ ಮಾಡಿ ವಿದ್ಯಾರ್ಥಿಗಳಿಗೆ ವಿತರಿಸುವಂತೆ ಪರಿಷತ್ತಿನ ನಿರ್ದೇಶಕರು ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿಗದಿಪಡಿಸಿರುವ ಪರೀಕ್ಷಾ ಕೇಂದ್ರದ ಮಾಹಿತಿಯನ್ನು ಹಾಗೂ ಸೂಕ್ತ ಮಾರ್ಗದರ್ಶನವನ್ನು ಸಂಬಂಧಿಸಿದ ಮುಖ್ಯ ಶಿಕ್ಷಕರು ಹಾಗೂ ಪ್ರಾಂಶುಪಾಲರು ನೀಡುವಂತೆ ನಿರ್ದೇಶನ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net